×
Ad

ಪುತ್ತೂರು: ಈಜಲು ಹೊಳೆಗಿಳಿದ ವೇಳೆ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪತ್ತೆ

Update: 2023-10-16 09:38 IST

ಪುತ್ತೂರು, ಅ.16: ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ಸ್ನೇಹಿತರೊಂದಿಗೆ ಹೊಳೆಗೆ ಈಜಲು ಇಳಿದ ವೇಳೆ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.

ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಹಾಜಿ ಎಂಬವರ ಪುತ್ರ ತಸ್ಲೀಮ್ (17) ಮೃತ ಬಾಲಕ. ಇವರು ಸುಳ್ಯದ ಅರಂತೋಡಿನಲ್ಲಿರುವ ತನ್ನ ಅಜ್ಜಿ ಮನೆಯಲ್ಲಿದ್ದು, ಅಲ್ಲಿಂದ ಪಿಯು ಕಾಜೇಜಿಗೆ ಹೋಗುತ್ತಿದ್ದರು. ಕಾಲೇಜಿಗೆ ರಜೆ ಇದ್ದ ಕಾರಣ ಮನೆಗೆ ಬಂದಿದ್ದರು ಎನ್ನಲಾಗಿದೆ.

ತಸ್ಲೀಮ್ ರವಿವಾರ ಸಂಜೆ ಸ್ನೇಹಿತರೊಂದಿಗೆ ಎರಕ್ಕಲ ಸಮೀಪದ ಗೌರಿ ಹೊಳೆಗೆ ಈಜಲು ತೆರಳಿದ್ದ ವೇಳೆ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಈ ವಿಷಯ ತಿಳಿಯುತ್ತಲೇ ಸ್ಥಳೀಯರು, ಮುಳುಗು ತಜ್ಞರು ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ತಸ್ಲೀಮ್ ಈಜಲು ತೆರಳಿದ್ದ ಸ್ಥಳದ ಸನಿಹವೇ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News