×
Ad

ಪುತ್ತೂರು | ತೆಂಕಿಲದಲ್ಲಿ ಗುಡ್ಡ ಕುಸಿತ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್

Update: 2024-08-02 10:51 IST

ಪುತ್ತೂರು, ಆ.2: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ತೆಂಕಿಲ ಬಪ್ಪಳಿಗೆಯ ಬೈಪಾಸ್ ನಲ್ಲಿ ಶುಕ್ರವಾರ ಮುಂಜಾನೆ ಗುಡ್ಡ ಕುಸಿತಗೊಂಡು ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಇಂದು ಮುಂಜಾನೆ ವೇಳೆ ಗುಡ್ಡ ಕುಸಿತ ಸಂಭವಿಸಿದ್ದು, ಭಾರೀ ಪ್ರಮಾಣದಲ್ಲಿ ಮಣ್ಣು ಬಿದ್ದ ಪರಿಣಾಮ ರಸ್ತೆ ಮುಚ್ಚಲ್ಪಟ್ಟಿದೆ.

ಗುಡ್ಡ ಕುಸಿತದ ವೇಳೆ ರಸ್ತೆಯಲ್ಲಿ ಯಾವುದೇ ವಾಹನ ಸಂಚಾರ ಇಲ್ಲದಿದ್ದ ಕಾರಣ ಸಂಭಾವ್ಯ ಅಪಾಯ ತಪ್ಪಿದೆ. ಆದರೆ ಗುಡ್ಡದ ಮೇಲ್ಬಾಗದಲ್ಲಿರುವ ದೇವಿ ದೇವಸ್ಥಾನ ಹಾಗೂ ಕೆಲ ಮನೆಗಳಿಗೆ ಅಪಾಯ ಎದುರಾಗಿದೆ.

ಮಡಿಕೇರಿ-ಮೈಸೂರಿಗೆ ಪ್ರಯಾಣಿಸುವವರು ಬದಲಿ ರಸ್ತೆಯಾಗಿ ಪುತ್ತೂರು ನಗರದ ಒಳಗಡೆ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News