×
Ad

ಪುತ್ತೂರು: ಮನೆ ಮೇಲೆ ಬಿದ್ದ ಬೃಹದಾಕಾರದ ಮರ; ಅಪಾರ ನಷ್ಟ

Update: 2025-06-17 09:39 IST

ಪುತ್ತೂರು: ತಾಲೂಕಿನ ಅರಿಯಡ್ಕ ಗ್ರಾಮದ ನೇರೋಳಡ್ಕ ಎಂಬಲ್ಲಿ ಮನೆಯೊಂದಕ್ಕೆ ಬೃಹತ್ ಗಾತ್ರದ ಮರ ಬಿದ್ದು, ಹಾನಿಯಾದ ಬಗ್ಗೆ ವರದಿಯಾಗಿದೆ. ಸುಮಾರು 2 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಮನೆ ಮೇಲೆ ಅಳವಡಿಸಿದ್ದ ಸಿಮೆಂಟ್ ಶೀಟ್ ಪೂರ್ಣ ಹಾನಿಯಾಗಿದೆ. ಮನೆಯೊಳಗಡೆಯಿದ್ದ ಜಯಂತಿ ಹಾಗೂ ಅವರ ಮಕ್ಕಳಾದ ಧನ್‌ರಾಜ್, ಚೇತನ್‌ರಾಜ್‌ ಅಪಾಯದಿಂದ ಪಾರಾಗಿದ್ದಾರೆ.

ಸ್ಥಳೀಯರು ಮರ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ.

ಸ್ಥಳಕ್ಕೆ ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ಸದಸ್ಯ ಹರೀಶ್ ರೈ ಜಾರತ್ತಾರು ಹಾಗೂ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News