×
Ad

ಪುತ್ತೂರು | ಅಂತರ್‌ರಾಜ್ಯ ಆರೋಪಿಯ ಬಂಧನ

Update: 2025-08-09 00:22 IST

ಪುತ್ತೂರು, ಆ.8: ಕೇರಳ ಹಾಗೂ ಕರ್ನಾಟಕಕ್ಕೆ ಬೇಕಾಗಿದ್ದ ಅಂತರ್‌ರಾಜ್ಯ ಆರೋಪಿ ಇಲಿಯಾಸ್ ಪಿ.ಎ. ಪೊಲೀಸ್ ತಂಡವು ಶುಕ್ರವಾರ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ವಿಯ್ಯೂರು ಎಂಬಲ್ಲಿನ ನಿವಾಸಿಯಾದ ಇಲಿಯಾಸ್ ವಿರುದ್ಧ ಪುತ್ತೂರು ನಗರ ಠಾಣೆ, ಉಪ್ಪಿನಂಗಡಿ ಹಾಗೂ ಧರ್ಮಸ್ಥಳ ಠಾಣೆಗಳಲ್ಲಿ ಹಲವು ಪ್ರಕರಣಗಳಿದ್ದು, ಕೇರಳದ ತ್ರಿಶೂರ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುತ್ತೂರು ಉಪವಿಭಾಗದ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕ ಕೌಶಿಕ್ ನೇತೃತ್ವದಲ್ಲಿ ರಚಿಸಿದ ವಿಶೇಷ ತಂಡವು ಆರೋಪಿಯನ್ನು ಬಂಧಿಸಿದೆ ಎಂದು ಪೊಲೀಸ್ ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News