×
Ad

ಪುತ್ತೂರು| ಬಿಜೆಪಿ ಮುಖಂಡನ ಪುತ್ರನಿಂದ ಅತ್ಯಾಚಾರ, ವಂಚನೆ ಪ್ರಕರಣ: ಆರೋಪಿ ಶ್ರೀಕೃಷ್ಣರಾವ್ ಜೈಲಿನಿಂದ ಬಿಡುಗಡೆ

Update: 2025-09-04 23:30 IST

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ, ಅಕ್ರಮ ದೈಹಿಕ ಸಂಬಂಧ ಬೆಳೆಸಿ ಸಹಪಾಠಿ ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿ ಮಾಡಿ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಪುತ್ರ ಶ್ರೀಕೃಷ್ಣ ಜೆ.ರಾವ್ ಇದೀಗ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ.

ಆರೋಪಿಗೆ ಕರ್ನಾಟಕ ಹೈಕೋರ್ಟ್ ಸೆ.3ರಂದು ಜಾಮೀನು ಮಂಜೂರು ಮಾಡಿತ್ತು. ಬಳಿಕ ಪುತ್ತೂರು ನ್ಯಾಯಾಲಯದಲ್ಲಿ ಜಾಮೀನಿಗೆ ಸಂಬಂಧಿಸಿದ ಭದ್ರತೆ ಮತ್ತಿತರ ಪ್ರಕ್ರಿಯೆಗಳನ್ನು ಸೆ.4ರಂದು ಮುಗಿಸಿ ಆರೋಪಿಯನ್ನು ಮಂಗಳೂರು ಜೈಲಿನಿಂದ ಬಿಡುಗಡೆಗೊಳಿಸಿ ಕರೆತರಲಾಗುತ್ತಿದೆ ಎಂದು ಮಾಹಿತಿ ಲಭಿಸಿದೆ.

ಆರೋಪಿ ಪರ ಹೈಕೋರ್ಟ್‌ನಲ್ಲಿ ಖ್ಯಾತ ನ್ಯಾಯವಾದಿ ಪಿ.ಪಿ.ಹೆಗ್ಡೆ ವಾದಿಸಿದ್ದರು. ಪುತ್ತೂರು ನ್ಯಾಯಾಲಯದಲ್ಲಿ ಸುರೇಶ್ ರೈ ಪಡ್ಡಂಬೈಲು, ರಾಘವ ಪಿ ಮತ್ತು ದೀಪಕ್ ರೈ ವಾದಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News