×
Ad

ಪುತ್ತೂರು | ದ್ವಿಚಕ್ರ ವಾಹನ ಸವಾರನ ಮೇಲೆ ಕಾಡುಹಂದಿ ದಾಳಿ: ಯುವಕಗೆ ತೀವ್ರ ಗಾಯ

Update: 2024-08-20 09:19 IST

ಪುತ್ತೂರು, ಆ.20: ದ್ವಿಚಕ್ರ ವಾಹನ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಮಂಗಳವಾರ ಮುಂಜಾನೆ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಧನುಷ್(30) ಗಾಯಗೊಂಡವರು.

ಕುಂಬ್ರ ಪೆಟ್ರೋಲ್ ಬಂಕ್ ನಲ್ಲಿ ಮ್ಯಾನೇಜರ್ ಆಗಿರುವ ಧನುಷ್ ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರ್ ನಲ್ಲಿ ಪೆಟ್ರೋಲ್ ಬಂಕ್ ಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕುರುಂಜ ಮಣ್ಣಾಪು ತಲುಪಿದಾಗ ಏಕಾಏಕಿ ಕಾಡು ಹಂದಿಯೊಂದು ಧನುಷ್ ಚಲಾಯಿಸುತ್ತಿದ್ದ ಸ್ಕೂಟರ್ ಮೇಲೆ ಎರಗಿದೆ. ಈ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಧನುಷ್ ಮೇಲೆ ಎರಗಿದ ಕಾಡುಹಂದಿ, ಅವರ ಬಲ ಕೈಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ. ಅಲ್ಲದೆ, ಇತರ ದೇಹದ ಭಾಗಗಳಿಗೆ ಗಾಯಗೊಳಿಸಿದೆ. ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News