×
Ad

ರಾಜೀವ ಗಾಂಧಿ ಆರೋಗ್ಯ ವಿವಿ: ಮಂಗಳೂರು ವಲಯದ ಅಂತರ್ ಕಾಲೇಜು ಟೂರ್ನಮೆಂಟ್

Update: 2024-08-22 21:59 IST

ಮಂಗಳೂರು: ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯ ಮಂಗಳೂರು ವಲಯ ಅಂತರ್ ಕಾಲೇಜು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಬ್ಯಾಡ್ಮಿಂಟನ್ ಟೂರ್ನಮೆಂಟ್ ಮಂಗಳ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್‌ಸ್ ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ. ಶರಣ್ ಶೆಟ್ಟಿ ಮತ್ತು ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ. ಗಣಪತಿ ಪಿ.ಸ್ಪರ್ಧಾಳುಗಳಿಗೆ ಶುಭ ಹಾರೈಸಿ ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು.

ಧರ್ಮಸ್ಥಳದ ಯೋಗ ಮತ್ತು ನ್ಯಾಚುರೋಪತಿನ ದೈಹಿಕ ಶಿಕ್ಷಣ ನಿರ್ದೇಶಕ ಧರ್ಮೇದ್ರ, ಮಂಗಳ ವಿದ್ಯಾ ಸಂಸ್ಥೆಯ ಡೀನ್ ಹಾಗೂ ಮಂಗಳ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸಯನ್ಸ್‌ನ ಪ್ರಾಂಶುಪಾಲ ಪ್ರೊ. ಪ್ರತಿಜ್ಞಾ ಸುಹಾಸಿನಿ ಜಿ. ಆರ್, ಕಾಲೇಜ್ ಆಫ್ ನರ್ಸಿಂಗ್ ಪ್ರಾಂಶುಪಾಲ ಪ್ರೊ. ಸುಬ್ರಮಣ್ಯ ನಾಯಕ್, ಕಾಲೇಜ್ ಆಫ್ ಫಿಸಿಯೋಥೆರಪಿ ಪ್ರಾಂಶುಪಾಲ ಡಾ. ಭರತ್ ಕೆ.ಎಚ್ ಉಪಸ್ಥಿತರಿದ್ದು ಶುಭಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಪುರುಷ ವಿದ್ಯಾರ್ಥಿಗಳು ಅಲ್ಲದೆ ಇತರ ಕಾಲೇಜುಗಳ ದೈಹಿಕ ಶಿಕ್ಷಣ ನಿರ್ದೇಶಕರು ಸಕ್ರೀಯವಾಗಿ ಭಾಗವಹಿಸಿದ್ದರು.

ದಕ್ಷಿಣ ಕನ್ನಡ, ಕೊಡಗು, ಉಡುಪಿ ಜಿಲ್ಲೆಗಳ 74 ಕಾಲೇಜುಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕ್ರೀಡಾ ಕೂಟದ ಸಂಚಾಲಕರಾದ ಕುಮಾರಿ ಕಾವ್ಯ ವೈ ವಂದಿಸಿದರು. ನಿಧಿ ದೇಚಮ್ಮ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News