×
Ad

ಮುಂದಿನ ಚುನಾವಣೆಯಲ್ಲಿ ರಮಾನಾಥ ರೈ ಅಭ್ಯರ್ಥಿ, ಅವರನ್ನು ಮತ್ತೆ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ

ಮೂಡೂರು - ಪಡೂರು ಜೋಡುಕರೆ ಕಂಬಳ

Update: 2026-03-07 23:18 IST

ಬಂಟ್ವಾಳ: 2028ಕ್ಕೂ ನಾವೇ ಅಧಿಕಾರಕ್ಕೆ ಬಂದೇ ಬರ್ತೀವಿ. ನಾವು ಅಧಿಕಾರದಲ್ಲಿದ್ದಾಗ ಕಂಬಳಕ್ಕೆ ಏನು ಪ್ರೋತ್ಸಾಹ ನೀಡಬೇಕೋ ಅದಕ್ಕೆ ಪ್ರೋತ್ಸಾಹ ನೀಡುತ್ತೇವೆ. ಕಂಬಳಕ್ಕೆ ಹಣಕಾಸಿನ ನೆರವನ್ನೂ ಕೊಡ್ತೇವೆ, ರಮಾನಾಥ ರೈ ಅವರನ್ನು ಸೋಲಿಸಿದ್ದು ಬೇಸರ ತಂದಿದೆ, ಮುಂದಿನ ಚುನಾವಣೆಯಲ್ಲಿ ಅವರೇ ಅಭ್ಯರ್ಥಿಯಾಗ್ತಾರೆ, ಅವರನ್ನು ಮತ್ತೆ ಗೆಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಂಟ್ವಾಳದ ನಾವೂರು ಕೂಡಿಬೈಲು ಎಂಬಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಶನಿವಾರ ನಡೆದ ಮುಡೂರು - ಪಡೂರು ಜೋಡುಕರೆ ಬಂಟ್ವಾಳ ಕಂಬಳದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಮಾನಾಥ ರೈ ಅವರು ತಮ್ಮ ಶಾಸಕ, ಸಚಿವರಾಗಿದ್ದಾಗ ಬಂಟ್ವಾಳ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದರೂ ಜನರು ಸೋಲಿಸಿರುವುದು ನೋವಿನ ಸಂಗತಿಯಾಗಿದೆ. ಇನ್ನೊಂದು ಸಾರಿ ಅವರು ನಿಲ್ಲುತ್ತಾರೆ. 2028ಕ್ಕೆ ಮತ್ತೆ ಅಭ್ಯರ್ಥಿ ಆಗುತ್ತಾರೆ ಎಂದರು.

ಬೆಂಜನಪದವು ಕ್ರೀಡಾಂಗಣ:-

ಬೆಂಜನಪದವಿನಲ್ಲಿ ಹತ್ತು ಕೋಟಿ ರೂ. ಮಂಜೂರಾಗಿತ್ತು, ಅದನ್ನು ಅನುಷ್ಠಾನ ಮಾಡಲು ಸಾಧ್ಯವಾಗಿಲ್ಲ. ಮತ್ತೊಮ್ಮೆ ಕ್ರೀಡಾಂಗಣ ನಿರ್ಮಾಣಕ್ಕೆ ನನಗೆ ಅವಕಾಶವನ್ನು ಮಾಡಿಕೊಡಬೇಕು ಎಂದು ಪ್ರಾಸ್ತಾವಿಕವಾಗಿ ಮಾತನಾಡಿದ ಮಾಜಿ ಸಚಿವ, ಕಂಬಳ ಸಮಿತಿ ಗೌರವಾಧ್ಯಕ್ಷ ರಮಾನಾಥ ರೈ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಿಎಂ ಈ ಬಾರಿ ಕ್ರೀಡಾಂಗಣ ನಿರ್ಮಾಣಕ್ಕೆ ನೆರವು ನೀಡುವುದಾಗಿ ಹೇಳಿದರು.

ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿದ್ಯಾವಾಚಸ್ಪತಿ ಡಾ.ಸಂತೋಷ್ ಗುರೂಜಿ, ಎಂ ಎಲ್ ಸಿ ಸಲೀಮ್ ಆಹ್ಮದ್, ಐವನ್ ಡಿಸೋಜ, ಶಾಸಕ ಅಶೋಕ್  ರೈ , ಟಿ.ಡಿ.ರಾಜೇಗೌಡ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ವಿವಿಧ ನಿಗಮದ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್, ಟಿ.ಎಮ್ ಶಹೀದ್ ತೆಕ್ಕಿಲ್, ಮಮತಾ ಡಿ.ಎಸ್. ಗಟ್ಟಿ, ಶಾಲೆಟ್ ಪಿಂಟೋ, ಸದಾಶಿವ ಉಳ್ಳಾಲ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ, ಸಹಿತ ಪ್ರಮುಖರು ಹಾಜರಿದ್ದರು. ಕಂಬಳ ಸಮಿತಿಯ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್ ಸ್ವಾಗತಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News