×
Ad

ಸುರತ್ಕಲ್ ನಲ್ಲಿ ರಂಗುರಂಗಿನ ರಂಗೋತ್ಸವ : ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

Update: 2025-11-10 19:06 IST

ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ರವಿವಾರ ಜರಗಿತು.

ಕಾರ್ಯಕ್ರಮವನ್ನು ಮಂಬೈ ವಿ.ಕೆ‌. ಸಮೂಹ ಸಂಸ್ಥೆಯ ಚೆಯರ್ ಮ್ಯಾನ್ ಮಧ್ಯಗುತ್ತು ಕರುಣಾಕರ ಎಂ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಉದ್ಘಾಟಿಸಿದರು.

ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ, ರಂಗಚಾವಡಿ ಸಂಸ್ಥೆ ಕಲಾವಿದರನ್ನು ಪ್ರೋತ್ಸಾಹಿಸುತ್ತಾ ಬಂದಿರುವ ಸಂಸ್ಥೆ. ಅನೇಕ ಕಲಾವಿದರನ್ನು ಗುರುತಿಸಿ ನಾಡಿಗೆ ಪರಿಚಯಿಸಿದ ಕೀರ್ತಿ ರಂಗಚಾವಡಿ ಸಂಸ್ಥೆಗೆ ಸಲ್ಲುತ್ತದೆ. ಮುಂದಿನ ದಿನಗಳಲ್ಲಿ ರಂಗಚಾವಡಿ ಅಕಾಡೆಮಿಯನ್ನಾಗಿ ರಚಿಸಿ ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದರು.

ಇದೇ ವೇಳೆ ತುಳು ರಂಗಭೂಮಿ ಮತ್ತು ಚಲನಚಿತ್ರಕಲಾವಿದ ನವೀನ್ ಡಿ. ಪಡೀಲ್ ಅವರಿಗೆ ಅತಿಥಿಗಳು ರಂಗಚಾವಡಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು‌.

ವೇದಿಕೆಯಲ್ಲಿ ಮಧ್ಯಗುತ್ತು ಕರುಣಾಕರ ಎಂ.ಶೆಟ್ಟಿ, ಉದ್ಯಮಿ ಗಿರೀಶ್ ಎಂ.ಶೆಟ್ಟಿ, ಡಾ.ಸಂಜೀವ ದಂಡೆಕೇರಿ, ಕಿಶೋರ್ ಡಿ.ಶೆಟ್ಟಿ, ಕರ್ನೂರು ಮೋಹನ್ ರೈ, ವಸಂತ ಶೆಟ್ಟಿ, ಈಶ್ವರ್ ಪ್ರಸಾದ್ ಶೆಟ್ಟಿ, ಅಶೋಕ್ ಶೆಟ್ಟಿ ತಡಂಬೈಲ್, ಭವಾನಿ ಶಂಕರ್ ಶೆಟ್ಟಿ ಬಾಳ, ರಮೆಶ್ ಶೆಟ್ಟಿ ಸುಭಾಷಿತನಗರ, ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ಎಂ. ದೇವಾನಂದ ಶೆಟ್ಟಿ, ಸುಧಾಕರ ಎಸ್. ಪೂಂಜ, ಉಲ್ಲಾಸ್ ಆರ್. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ‌ ನಿರೂಪಿಸಿದರು. ಬಳಿಕ ರಂಗುರಂಗಿನರಂಗೋತ್ಸವ ಹಾಸ್ಯ ಕಾರ್ಯಕ್ರಮ‌ ಜರಗಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News