×
Ad

ಪಿಕ್‌ಪಾಕೆಟ್ ನಿಯಂತ್ರಣಕ್ಕೆ ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘ ಮನವಿ

Update: 2025-07-23 20:52 IST

ಮಂಗಳೂರು: ನಗರದ ಖಾಸಗಿ ಬಸ್ ಮತ್ತು ಬಸ್ ನಿಲ್ದಾಣಗಳಲ್ಲಿ ಹಾಗೂ ಇತರ ಜನಸಂದಣಿಗಳಿರುವ ಪ್ರದೇಶಗಳಲ್ಲಿ ಪಿಕ್ ಪಾಕೆಟ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದ ಬಸ್ ನೌಕರರ ಮೇಲೆ ಪ್ರಯಾಣಿ ಕರು ಅನುಮಾನ ಮೂಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ನೌಕರರ ಭದ್ರತೆಯ ಉದ್ದೇಶದಿಂದ ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘವು ಬುಧವಾರ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದೆ.

ಪಿಕ್‌ಪಾಕೆಟ್ ತಡೆಗಟ್ಟುವ ನಿಟ್ಟಿನಲ್ಲಿ ಬಸ್ ನಿಲ್ದಾಣಗಳಲ್ಲಿ ಸಿಸಿಟಿವಿ ಕ್ಯಾಮರಾ ವ್ಯವಸ್ಥೆ ಬಲಪಡಿಸುವುದು, ಪೊಲೀಸರ ಪೇಟ್ರೋಲಿಂಗ್ ಹೆಚ್ಚಿಸುವುದು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತಹ ಕ್ರಮಗಳನ್ನು ಕೈಗೊಳ್ಳಲು ಸಂಘ ಆಗ್ರಹಿಸಿದೆ.

ಈ ಸಂದರ್ಭ ಸಂಘದ ಅಧ್ಯಕ್ಷ ಉಸ್ಮಾನ್ ಅಲ್ತಾಫ್, ಜೊತೆ ಕಾರ್ಯದರ್ಶಿ ಡೆರಿಕ್ ಕ್ಯೂವೆಲ್ಲೋ, ರವೀಂದ್ರ ರವಿ, ಸದಸ್ಯರಾದ ರಫೀಕ್, ಕಿರಣ್ ಡಿಸೋಜ, ವಿಜಯ್, ರೋಹನ್ ನಿಯೋಗದಲ್ಲಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News