ಮಹಿಳೆಯರ ಜೀವನಮಟ್ಟ ಸುಧಾರಣೆಗೆ ದೊರೆತ ಮನ್ನಣೆ: ಡಾ.ಎಂ.ಎನ್. ರಾಜೇಂದ್ರ ಕುಮಾರ್
ಅಮೆರಿಕದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲ ದಿಂದ ಪ್ರಶಸ್ತಿ ಪ್ರದಾನ
ಮಂಗಳೂರು: ಈ ಪ್ರಶಸ್ತಿ ಮಹಿಳೆಯರ ಜೀವನಮಟ್ಟ ಸುಧಾರಣೆಗೆ ದೊರೆತ ಮನ್ನಣೆ, ಮಹಿಳಾ ಸಬಲೀಕರಣದಲ್ಲಿ ಸಲ್ಲಿಸಿದ ಮಹತ್ ಸಾಧನೆಯನ್ನು ಗುರುತಿಸಿ ಅಮೆರಿಕದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲ ಯದ ವತಿಯಿಂದ ಈ ಪ್ರಶಸ್ತಿ ನೀಡಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಮತ್ತು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ನ ಸ್ಥಾಪಕ ಟ್ರಸ್ಟಿ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರಕು ಮಾರ್ ತಿಳಿಸಿದ್ದಾರೆ.
ಅವರು ಮಂಗಳವಾರ ಅಮೆರಿಕದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಿಂದ ‘ವಿಷನರಿ ಲೀಡರ್‌ಶಿಪ್ ಅವಾರ್ಡ್ ಇನ್ ವುಮೆನ್ ಎಂಪವರ್‌ಮೆಂಟ್’ನ್ನು ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸ್ವೀಕರಿಸಿ ಮಾತನಾಡಿದರು.
ವಿಶ್ವದ ಅಗ್ರಗಣ್ಯ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಪೆನ್ಸಿಲ್ವೇನಿಯಾವಿಶ್ವವಿದ್ಯಾಲಯದ ತಂಡದ ನಿರಂತರ ಭೇಟಿ, ಎಸ್‌ಸಿಡಿಸಿಸಿ ಬ್ಯಾಂಕ್ ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್‌ಗಳು ಗ್ರಾಮೀಣ ಮಟ್ಟದಲ್ಲಿ ನಡೆಸುತ್ತಿರುವ ನೈಜ ಹಾಗೂ ಪರಿಣಾಮಕಾರಿ ಕಾರ್ಯಗಳಿಗೆ ದೊರೆತ ಮಹತ್ವದ ಮಾನ್ಯತೆಯಾಗಿದೆ ಎಂದು ಡಾ. ರಾಜೇಂದ್ರಕುಮಾರ್ ಹೇಳಿದರು.
ಹಿಂದುಳಿದ ವರ್ಗಗಳ, ವಿಶೇಷವಾಗಿ ಮಹಿಳೆಯರ ಜೀವನಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ಕೈಗೊಂಡಿ ರುವ ನಮ್ಮ ಮುಂದಾಳತ್ವಗಳನ್ನು ಗುರುತಿಸಿರುವುದಕ್ಕೆ ನಾನು ವಿನಮ್ರನಾಗಿದ್ದೇನೆ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಭವಿಷ್ಯದಲ್ಲಿ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ನಡುವಿನ ಈ ಶೈಕ್ಷಣಿಕ ಹಾಗೂ ಸಾಮಾಜಿಕ ಸಹಕಾರವನ್ನು ಇನ್ನೂ ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಆಶಯವಿದೆ ಎಂದು ಅವರು ಹೇಳಿದರು.
ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಅಧ್ಯಯನ ತಂಡ ಎಸ್‌ಸಿಡಿಸಿಸಿ ಬ್ಯಾಂಕಿಗೆ ಮಂಗಳವಾರ ಆಗಮಿಸಿದ್ದು, ಈ ವೇಳೆ ಡಾ.ಎಂ.ಎನ್. ರಾಜೇಂದ್ರಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ನೆರವೇರಿಸಲಾಯಿತು.
ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯ ವತಿಯಿಂದ ಪ್ರೊಫೆಸರ್ ಫೆಮಿಡಾ ಹ್ಯಾಂಡಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಬಳಿಕ ಮಾತನಾಡಿದ ಪ್ರೊ. ಫೆಮಿಡಾ ಹ್ಯಾಂಡಿ, ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ದೇಶದ ವಿವಿಧ ಭಾಗಗಳಲ್ಲಿ ಪ್ರವಾಸ ಮಾಡಿ ನವೋದಯ ಸ್ವಸಹಾಯ ಸಂಘ ಚಳವಳಿಯ ಮೂಲಕ ಹಿಂದುಳಿದ ವರ್ಗಗಳ, ವಿಶೇಷ ವಾಗ ಮಹಿಳೆಯರ ಸಬಲೀಕರಣಕ್ಕಾಗಿ ಅಹೋರಾತ್ರಿ ಶ್ರಮಿಸುತ್ತಿದ್ದಾರೆ. ಸ್ಥಾನಕ್ಕಿಂತ ಪ್ರಭಾವವೇ ನಿಜವಾದ ನಾಯಕತ್ವ ಎಂಬ ನಂಬಿಕೆಯನ್ನು ಅವರ ಜೀವನ ಪ್ರತಿಬಿಂಬಿಸುತ್ತದೆ. ಅಸಂಖ್ಯಾತ ಜನರ ಬದುಕಿಗೆ ಬೆಳಕು ನೀಡಿದ ಅವರ ದೃಷ್ಟಿ, ಕರುಣೆ ಮತ್ತು ಸೇವಾ ಮನೋಭಾವವನ್ನು ಗೌರವಿಸುವ ಸಲುವಾಗಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದರು
ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ಕಳೆದ 15 ವರ್ಷಗಳಿಂದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ತಂಡ ಪ್ರೊ. ಫೆಮಿಡಾ ಹ್ಯಾಂಡಿ ಅವರ ನೇತೃತ್ವದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್‌ಗೆ ನಿರಂತರವಾಗಿ ಭೇಟಿ ನೀಡುತ್ತಿದೆ. ಸ್ವಸಹಾಯ ಸಂಘಗಳ ಮೂಲಕ ಜಾರಿಗೊಳಿಸಿರುವ ಮಹಿಳಾ ಸಬಲೀಕರಣ ಹಾಗೂ ಸೂಕ್ಷ್ಮ ಹಣಕಾಸು (ಮೈಕ್ರೋ ಫೈನಾನ್ಸ್) ಮಾದರಿಯ ಯಶಸ್ಸನ್ನು ಅಧ್ಯಯನ ಮಾಡುತ್ತಿದೆ ಎಂದರು.
ಅಮೆರಿಕದ ಪ್ರತಿಷ್ಠಿತ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಅಧ್ಯಯನ ತಂಡ ಪ್ರೊಫೆಸರ್ ಫೆಮಿಡಾ ಹ್ಯಾಂಡಿ , ಪ್ರೊಫೆಸರ್ ಲ್ಯೂಕಸ್ ವಿನೋದ್ ದೀಕ್ಷಿತ್, ನಿಕೋಲ್, ಅಲೆಸ್ಸಾಂಡ್ರೊ (ಅಲೆಕ್ಸ್), ಅಬಿಗೈಲ್ (ಪ್ರೊಫೆಸರ್ ಫೆಮಿಡಾ ಅವರ ಬೋಧನಾ ಸಹಾಯಕ), ಬಿಜಾನ್ ಚಾನೆಲ್ ಆಂಡರ್ಸನ್ , ಗ್ರೇಸ್ ಕ್ಯಾಂಪ್ಬೆಲ್, ಎಲಿಷಾ ಚೋಯ್, ಎಮ್ಮಾ ಕ್ಲಾರ್ಕ್, ಜೆನ್ನಿ ಬೆತ್, ಕ್ರಿಸ್ಟಾ ಸ್ಮಿತ್, ಮಂಡಿಸಾ ಥಾಮಸ್, ಎಲಿಜಬೆತ್ ರೀಲಿ, ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ , ಬ್ಯಾಂಕ್ ನಿರ್ದೇಶಕರಾದ ಎಂ.ವಾದಿರಾಜ ಶೆಟ್ಟಿ , ಶಶಿಕುಮಾರ್ ರೈ ಬಾಲ್ಯೋಟ್ಟು , ಸದಾಶಿವ ಉಳ್ಳಾಲ್, ಎಸ್.ಬಿ. ಜಯರಾಮ್ ರೈ, ಅಶೋಕ್ ಕುಮಾರ್ ಶೆಟ್ಟಿ, ಎಂ.ಮಹೇಶ್ ಹೆಗ್ಡೆ, ಕೆ.ಜೈರಾಜ್ ಬಿ ರೈ, ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.