×
Ad

ಮಂಗಳೂರು: ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಚಿಕಿತ್ಸೆಗೆ ಪರಿಹಾರ ಬಿಡುಗಡೆ

Update: 2024-10-19 18:50 IST

ಮಂಗಳೂರು: ನಗರದ ಕುದ್ರೋಳಿ ನಿವಾಸಿ ಅನ್ವರ್ ಹುಸೈನ್ ಅವರಿಗೆ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 2,86, 360 ರೂ. ಪರಿಹಾರ ಬಿಡುಗಡೆಯಾಗಿದೆ.

ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರ ಶಿಫಾರಸು ಮೇರೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರಾಗಿರುವ ಪರಿಹಾರ ಧನ ನೇರವಾಗಿ ಖಾತೆಗೆ ಜಮೆ ಆಗಿದೆ.

ಅನ್ವರ್ ಹುಸೈನ್ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುವುದಕ್ಕಾಗಿ ಶಾಸಕ ಐವನ್ ಡಿಸೋಜ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪರಿಹಾರ ಮಂಜೂರು ಮಾಡಿ ಶೀಘ್ರ ಗುಣಮುಖವಾಗಲೆಂದು ಹಾರೈಸಿದ ಪತ್ರವನ್ನು ಅನ್ವರ್ ಹುಸೈನ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಾರ್ಪೋರೇಟರ್ ಸತೀಶ್ ಪೆಂಗಲ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News