ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ವಿಶೇಷ ಅನುದಾನ ನೀಡುವಂತೆ ಮನವಿ
ಮಂಗಳೂರು: ಕಾರ್ಕಳದಲ್ಲಿ ಸುಮಾರು 800 ವರ್ಷಗಳಿಗೂ ಹಿಂದೆ ಪ್ರತಿಷ್ಠಾಪಿಸಲ್ಪಟ್ಟ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮೂರ್ತಿ ಒಂದು ಐತಿಹಾಸಿಕ ಇತಿಹಾಸವಾಗಿದೆ. ಇಂತಹ ಅದ್ಭುತ ಶಿಲಾಮೂರ್ತಿಗೆ 12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ 2027ರ ಫೆಬ್ರವರಿಯಲ್ಲಿ ನಡೆಯಲಿದೆ.
ಈ ಧಾರ್ಮಿಕ ನೆಲೆಯ ಮಹಾಮಸ್ತಕಾಭಿಷೇಕ ಮಹೋತ್ಸವವನ್ನು ಅತ್ಯಂತ ಅದ್ದೂರಿಯಲ್ಲಿ ನಡೆಸಲು ಕಾರ್ಕಳ ಭಗವಾನ್ ಶ್ರಿ ಬಾಹುಬಲಿ ಸ್ವಾಮಿ ಮಹಾಮಸ್ತಾಕಾಭಿಷೇಕ ಸಮಿತಿ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಕಾರ್ಕಳ ನಗರಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ವಿಶೇಷ ಅನುದಾನವನ್ನು ಕರ್ನಾಟಕ ಸರಕಾರದ ವತಿಯಿಂದ ಬಿಡುಗಡೆಗೊಳಿಸುವ ಬಗ್ಗೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಬೆಂಗಳೂರಿನಲ್ಲಿ ಮಂಗಳವಾರ ಮನವಿಯನ್ನು ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ವೃಷಭ ದೇವ ಅಧಿಕಾರಿ ವರಂಗ ಇವರು ಉಪಸ್ಥಿತರಿದ್ದರು.