×
Ad

ದುಬೈಯಲ್ಲಿ ರಸ್ತೆ ಅಪಘಾತ: ಮಂಗಳೂರಿನ ಯುವತಿ ಮೃತ್ಯು

Update: 2024-02-23 16:31 IST

ಉಳ್ಳಾಲ: ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಎಂಬವರು ಮೃತಪಟ್ಟಿದ್ದಾರೆ.

ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಅವರ ಪುತ್ರಿ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದ ಬಳಿಕ ಅವರು ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯೊಂದರಲ್ಲಿ ಒಂದು ವರ್ಷ ಕಾರ್ಯ ನಿರ್ವಹಿಸಿದ್ದರು.

2019ರಲ್ಲಿ ದುಬೈಗೆ ತೆರಳಿ ಕಂಪೆನಿಯೊಂದರಲ್ಲಿ ಕಳೆದ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಪ್ರತೀ ದಿನ ಕಂಪೆನಿಯ ಕ್ಯಾಬ್‍ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಫೆ.22ರಂದು ತಡವಾಯಿತು ಎಂದು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News