×
Ad

ರೌಡಿಶೀಟರ್ ಹತ್ಯೆ ಪ್ರಕರಣ| ಕೊಲೆ ಆರೋಪಿಗಳ ಮಾಹಿತಿ ಸಿಕ್ಕಿದೆ: ಎಡಿಜಿಪಿ ಆರ್. ಹಿತೇಂದ್ರ

Update: 2025-05-02 18:16 IST

ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಗ್ಗೆ ಸ್ಪಷ್ಟ ಸುಳಿವು ಸಿಕ್ಕಿದೆ. ಅವರ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ. ಹಾಗಾಗಿ ಸಾರ್ವಜನಿಕರು ಶಾಂತಿ, ಸುವ್ಯವಸ್ಥೆ ಕಾಪಾಡಬೇಕು ಎಂದು ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಹೇಳಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೊಲೆಗಡುಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಭದ್ರತೆಯ ಹಿನ್ನೆಲೆಯಲ್ಲಿ 22 ಕೆಎಸ್‌ಆರ್‌ಪಿ, 5 ಎಸ್ಪಿ, 1 ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News