×
Ad

ಪುತ್ತೂರು| ವಿವಾದಾತ್ಮಕ ಹೇಳಿಕೆ ಪ್ರಕರಣ: ವಿಚಾರಣೆಗೆ ಹಾಜರಾದ ಆರೆಸ್ಸೆಸ್‌ ಮುಖಂಡ ಕಲ್ಕಡ್ಕ ಪ್ರಭಾಕರ ಭಟ್

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಜರು

Update: 2025-11-05 18:40 IST

ಪುತ್ತೂರು: ಸಾರ್ವಜನಿಕ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್  ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆಗೆ ಬುಧವಾರ ಸಂಜೆ ಹಾಜರಾದರು.

ಪುತ್ತೂರು ಗ್ರಾಮಾಂತರ ಠಾಣೆಯ ತನಿಖಾಧಿಕಾರಿ‌ಯ ನೊಟೀಸ್ ಹಿನ್ನೆಲೆ ಪ್ರಭಾಕರ ಭಟ್ ವಿಚಾರಣೆಗೆ ಹಾಜರಾಗಿದ್ದಾರೆ.

ಅ.20ರಂದು ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ನಡೆದ 'ದೀಪೋತ್ಸವ' ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಾಡಿದ ಭಾಷಣ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟು ಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟು ಮಾಡುವಂತಿತ್ತು ಎಂದು ಆರೋಪಿಸಿ ಮಹಿಳಾ ಪರ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಪುತ್ತೂರು ಗ್ರಾಮಾಂತರ ಠಾಣೆಗೆ ನೀಡಿದ್ದರು. ದೂರಿನಂತೆ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಅ.25ರಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾಯಾಲಯ ಸೂಚಿಸಿರುವ ಹಿನ್ನೆಲೆ ಹೇಳಿಕೆ ದಾಖಲಿಸಿ ಬಿಡುವ ಸಾಧ್ಯತೆ ಇದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News