ಕುಳಾಯಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ
Update: 2023-08-28 23:21 IST
ಮಂಗಳೂರು, ಆ.29: ಕುಳಾಯಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಹಾಗೂ ಡಿಸಿಸಿ ಬ್ಯಾಂಕಿನೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವುದಕ್ಕಾಗಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ‘ ಸಾಧನಾ ಪ್ರಶಸ್ತಿ 2022-23 ’ ಲಭಿಸಿದೆ.
ಎಸ್‌ಸಿಡಿಸಿಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಿ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಹಾಗೂ ಆಡಳಿತ ಮಂಡಳಿಯವರು ಸಹಕಾರಿ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ ಕುಮಾರವರನ್ನು ಸನ್ಮಾನಿಸಿ ಪ್ರಶಸ್ತಿಯನ್ನು ಪ್ರಧಾನ ಮಾಡಿದರು.
ಸಂಘದ ಉಪಾಧ್ಯಕ್ಷರಾದ ರಾಮ ಎಸ್ ಬಂಗೇರ, ನಿರ್ದೇಶಕ ಭಾಸ್ಕರ ಕುಲಾಲ್ ಬರ್ಕೆ, ಪಧ್ಮನಾಭ ಬಂಗೇರ, ಪ್ರದೀಪ್ ಅತ್ತಾವರ ಹಾಗೂ ಜೊತೆ ಕಾರ್ಯದರ್ಶಿ ರಮೇಶ್ ಉಪಸ್ಥಿತರಿದ್ದರು.