×
Ad

ಸಜಿಪ: ಜೂನ್ 12 ರಂದು ಮಲಾಯಿಬೆಟ್ಟು ನವೀಕೃತ ಜುಮಾ ಮಸೀದಿ ಕಟ್ಟಡ ಉದ್ಘಾಟನೆ

Update: 2024-06-10 15:11 IST

ಬಂಟ್ವಾಳ : ಸಜಿಪಮುನ್ನೂರು ಗ್ರಾಮದ ಮಲಾಯಿಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿಯ ನವೀಕೃತ ಮಸೀದಿ ಕಟ್ಟಡದ ಉದ್ಘಾಟನಾ ಸಮಾರಂಭವು ಜೂನ್ 12 ರಂದು ಸಂಜೆ ನಡೆಯಲಿದೆ.

ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಅಧ್ಯಕ್ಷ ಸಯ್ಯಿದುಲ್ ಉಲಮಾ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ಅಸರ್ ನಮಾಜಿನ ಬಳಿಕ ನವೀಕೃತ ಮಸೀದಿ ಕಟ್ಟಡವನ್ನು ಉದ್ಘಾಟಿಸಿ ದುವಾಶೀರ್ವಚನಗೈಯುವರು. ಮಸೀದಿ ಅಧ್ಯಕ್ಷ ಯೂಸುಫ್ ಕರಂದಾಡಿ ಅಧ್ಯಕ್ಷತೆ ವಹಿಸುವರು.

ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಖಾಝಿ ಶೈಖುನಾ ಹಾಜಿ ತ್ವಾಖಾ ಅಹ್ಮದ್ ಮುಸ್ಲಿಯಾರ್, ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಬೆಳ್ತಂಗಡಿ, ಅಬ್ದುಲ್ ಖಾದರ್ ಅಲ್-ಖಾಸಿಮಿ ಬಂಬ್ರಾಣ, ಸಯ್ಯಿದ್ ಹುಸೈನ್ ಬಾ-ಅಲವಿ ತಂಙಳ್ ಕುಕ್ಕಾಜೆ, ಇರ್ಶಾದ್ ದಾರಿಮಿ ಅಲ್-ಜಝರಿ ಮಿತ್ತಬೈಲು, ಮಾಜಿ ಸಚಿವ ಬಿ ರಮಾನಾಥ ರೈ, ಕೆಪಿಸಿಸಿ ಉಪಾಧ್ಯಕ್ಷ ಪದ್ಮರಾಜ್ ಆರ್ ಪೂಜಾರಿ, ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ ಅಶ್ವನಿ ಕುಮಾರ್ ರೈ, ಸಜಿಪಮೂಡ ಗ್ರಾ.ಪಂ. ಮಾಜಿ ಅಧ್ಯಕ್ಷ ದೇವಿಪ್ರಸಾದ್ ಪೂಂಜಾ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಮಸೀದಿ ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News