×
Ad

ಮಂಗಳೂರು: ಎಂಡಿಎಂಎ ಮಾರಾಟ ಪ್ರಕರಣ; ಇಬ್ಬರ ಬಂಧನ

Update: 2023-09-29 22:41 IST

ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ ನಡೆಸಲು ಯತ್ನಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸ್ ತಂಡ ಉಳ್ಳಾಲದ ಸೀಗ್ರೌಂಡ್ ನಲ್ಲಿ ಬಂಧಿಸಿದ್ದಾರೆ.

ಮಾಸ್ತಿಕಟ್ಟೆಯ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪುರದ ಸಮೀರ್ ಬಂಧಿತರು. ಇಬ್ಬರು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಸ್ಥಳಕ್ಕಾಗಮಿಸಿ ಬಂಧಿಸಿದ್ದಾರೆ. ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.

ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ ಐ ಶೀತಲ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News