×
Ad

ಉಳ್ಳಾಲ: ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಸಂಘಪರಿವಾರದ ಕಾರ್ಯಕರ್ತನಿಗೆ ಹಲ್ಲೆ; ಆರೋಪ

Update: 2024-06-06 12:18 IST

ಉಳ್ಳಾಲ: ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಸಂಘಪರಿವಾರದ ಕಾರ್ಯಕರ್ತನಿಗೆ ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ಬುಧವಾರ ನಡೆದಿದೆ.

ಕುಂಪಲ ನಿವಾಸಿ ಸಂಘಪರಿವಾರದ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ಟಿ (39) ಎಂಬವರ ಮೇಲೆ ಹಲ್ಲೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತ ಗೌತಮ್ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.

ಜೂ. 4 ರಂದು ಚುನಾವಣೆ ಫಲಿತಾಂಶ ಪ್ರಕಟವಾದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಲಾಗಿತ್ತು. ಈ ವಿಚಾರದಲ್ಲಿ ಸಂಘಪರಿವಾರ ಹಾಗೂ ಸ್ಥಳೀಯ ಸಂಸ್ಥೆಯೊಂದರ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಸಂಬಂಧ ಗುರುವಾರ ಕೆಲಸದಿಂದ ವಾಪಸ್ಸಾಗುತ್ತಿದ್ದ ಪ್ರವೀಣ್ ಪೂಜಾರಿ ಅವರನ್ನು ಅಡ್ಡಗಟ್ಟಿದ ಗೌತಮ್ ಹಲ್ಲೆ ನಡೆಸಿ ದೂಡಿ ಹಾಕಿದ್ದ ಆರೋಪಿಸಲಾಗಿದೆ. ಪ್ರವೀಣ್ ತಲೆಗೆ ಗಾಯವಾಗಿದೆ. ಗಾಯಾಳುವನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪ್ರವೀಣ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News