×
Ad

ಸೌಜನ್ಯಾ ಅತ್ಯಾಚಾರ-ಹತ್ಯೆ ಪ್ರಕರಣ: ಮರು ತನಿಖೆಗೆ ಆಗ್ರಹಿಸಿ ಸಲ್ಲಿಸಿದ್ದ ಪಿಐಎಲ್ ವಜಾ

Update: 2023-09-08 23:05 IST

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನಡೆದ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣದ ಬಗ್ಗೆ ಮರು ತನಿಖೆಗೆ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ರಾಜ್ಯ ಉಚ್ಚ ನ್ಯಾಯಾಲಯ ವಜಾಗೊಳಿಸಿದೆ.

ನವೀನ್ ಕುಮಾರ್ ನೆರಿಯ, ಗಿರೀಶ್ ಬಾರಧ್ವಾಜ್ ಹಾಗೂ ಪುತ್ತೂರಿನ ವಿನಾಯಕ ಫ್ರೆಂಡ್ಸ್ ಟ್ರಸ್ಟ್, ಬಲ್ನಾಡು ಈ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ಬಗ್ಗೆ ವಾದ ಆಲಿಸಿದ ನ್ಯಾಯಾಲಯವು ಸರಕಾರ ಅಥವಾ ಮೂಲ ದೂರುದಾರರು ಅಥವಾ ಸಂತ್ರಸ್ತರ ಕುಟುಂಬಕ್ಕೆ ಮಾತ್ರ ಆರೋಪಿಯನ್ನು ದೋಷಮುಕ್ತಗೊಳಿಸಿದ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ. ತನಿಖಾ ಲೋಪದ ಅಂಶವನ್ನು ಮೇಲ್ಮನವಿಯಲ್ಲಿ ಪರಿಗಣಿಸಲೂ ಕಾನೂನಿನಲ್ಲಿ ಅವಕಾಶವಿದೆ. ಅರ್ಜಿದಾರರ ಉದ್ದೇಶ ಒಳ್ಳೆಯದೇ ಇದ್ದರೂ ಕಾನೂನಿನ ಮಿತಿಯೊಳಗೆ ವ್ಯವಹರಿಸಬೇಕಾಗುತ್ತದೆ ಎಂದು ಅಭಿಪ್ರಾಯಿಸಿದ ನ್ಯಾಯಾಲಯವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಲೇವಾರಿಗೊಳಿಸಿದೆ.

ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News