×
Ad

ನಕಲಿ ಫೇಸ್‌ಬುಕ್ ಪೇಜ್ ವಿರುದ್ಧ ಎಸ್‌ಡಿಪಿಐ ದೂರು

Update: 2023-09-01 21:24 IST

ಮಂಗಳೂರು : Isupport sdpi ಎಂಬ ಹೆಸರಿನಲ್ಲಿರುವ ನಕಲಿ ಫೇಸ್‌ಬುಕ್ ಪೇಜ್ ಅಡ್ಮಿನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್‌ಡಿಪಿಐ ದ.ಕ. ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕಿಡಿಗೇಡಿಗಳು ಪಕ್ಷದ ಹೆಸರಿನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಪೇಜ್ ರಚಿಸಿ ಅದರಲ್ಲಿ ಪಕ್ಷದ ಕೆಲವು ಕಾರ್ಯಚಟುವಟಿಕೆಗಳ ಹಾಗೂ ಅಶ್ಲೀಲ ವೀಡಿಯೋಗಳನ್ನು ನಿರಂತರವಾಗಿ ಅಪ್ಲೋಡ್ ಮಾಡುವ ಮೂಲಕ ಸಮಾಜದಲ್ಲಿ ಪಕ್ಷದ ವರ್ಚಸ್ಸಿಗೆ ಧಕ್ಕೆಯುಂಟು ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಅದಲ್ಲದೆ ಮಂಗಳೂರು ನಗರ ಪೊಲೀಸ್ ಉಪಾಯುಕ್ತರನ್ನು ಜಿಲ್ಲಾ ನಿಯೋಗವು ಭೇಟಿಯಾಗಿ ಕಾನೂನು ಕ್ರಮಕ್ಕೆ ಒತ್ತಾಯಿಸಿತು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು, ಮಂಗಳೂರು ದಕ್ಷಿಣ ಕ್ಷೇತ್ರ ಸಮಿತಿಯ ಸದಸ್ಯ ಶರೀಫ್ ಪಾಂಡೇಶ್ವರ ನಿಯೋಗದಲ್ಲಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News