6ನೇ ಗುರುತು ಸ್ಥಳದಲ್ಲಿ ಅಸ್ಥಿಪಂಜರ ಪತ್ತೆ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹಲವಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಗುರುತಿಸಿದ ಆರನೇ ಸ್ಥಳದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿರುವ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರನೇ ಗುರುತು ಸ್ಥಳದಲ್ಲಿ ಜುಲೈ 31ರಂದು ಅಸ್ಥಿಪಂಜರ ಪತ್ತೆಯಾದ ಘಟನೆಗೆ ಸಂಬಂಧಿಸಿ ಎಸ್.ಐ.ಟಿ ತನಿಖಾಧಿಕಾರಿ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಸ್ಟ್ 1ರಂದು ದೂರು ನೀಡಿದ್ದು, ಅದರಂತ ಯುಡಿಆರ್ ಪ್ರಕರಣ ದಾಖಲಾಗಿದೆ.
ಪ್ರಕರಣ ಎಸ್ಐಟಿಗೆ ಹಸ್ತಾಂತರ:
ಅಸ್ಥಿಪಂಜರದ ಅವಶೇಷಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಎಸ್.ಐ.ಟಿ ಅಧಿಕಾರಿಗಳು ಕಳುಹಿಸಿದ್ದಾರೆ. ಈ ಮಧ್ಯೆ ದೂರುದಾರ ಗುರುತಿಸಿದ್ದ 6ನೇ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಪ್ರಕರಣಕ್ಕೆ ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪೊಲೀಸರು ಹೆಚ್ಚಿನ ತನಿಖೆಗಾಗಿ ಅದನ್ನು ಎಸ್ಐಟಿಗೆ ಹಸ್ತಾಂತರ ಮಾಡಲಿದ್ದಾರೆ.