×
Ad

SMA ವತಿಯಿಂದ ನೂತನ ಮದರಸ ಕಟ್ಟಡ ಉದ್ಘಾಟನೆ

Update: 2025-06-18 11:39 IST

ಬೆಳ್ತಂಗಡಿ: ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ಕರ್ನಾಟಕ ರಾಜ್ಯ ಸಮಿತಿಯ ಮದರಸ ನಿರ್ಮಾಣ ಯೋಜನೆಯಡಿಯಲ್ಲಿ ಗುರುವಾಯನಕೆರೆ ಸಮೀಪದ ಪೆರಳ್ದರಕಟ್ಟೆಯ ಕಾಂತಿಜಾಲ್ ಎಂಬಲ್ಲಿ ನಿರ್ಮಾಣಗೊಂಡ ಎಸ್ ಎಂ ಎ 3ನೇ ಮದರಸದ ಉದ್ಘಾಟನೆ ನಡೆಯಿತು.

ಎಸ್ ಎಂ ಎ ರಾಜ್ಯ ಸಮಿತಿಯ ಅಧ್ಯಕ್ಷರಾದ ಸೆಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ ನೂತನ ಮದರಸ ಕಟ್ಟಡವನ್ನು ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಮದನಿ ಜೆಪ್ಪು ಉದ್ಘಾಟಿಸಿದರು.

 ಎಸ್ ಎಂ ಎ ರಾಜ್ಯಾಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹಮೀದ್ ಹಾಜಿ ಕೊಡುಂಗಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್ ಜೆ ಎಂ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆಕೆ ಮುಹಿಯುದ್ದೀನ್ ಕಾಮಿಲ್ ಸಖಾಫಿ, ಎಸ್ ಎಂ ಎ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿ ಅಧ್ಯಕ್ಷ ಅಬ್ಬಾಸ್ ಬಟ್ಲಡ್ಕ, ವೆಸ್ಟ್ ಜಿಲ್ಲಾ ಸಮಿತಿ ಅಧ್ಯಕ್ಷ ಬಶೀರ್ ಕೂಳೂರು ಶುಭಾಶಯ ಕೋರಿ ಮಾತನಾಡಿದರು.

 ರಾಜ್ಯ ಸಮಿತಿ ಪದಾಧಿಕಾರಿಗಳಾದ ಎಂಬಿ ಮುಹಮ್ಮದ್ ಸಾದಿಕ್, ಇಸ್ಮಾಯಿಲ್ ಸಅದಿ ಉರುಮಣೆ, ಪಿಎಂ ಇಬ್ರಾಹಿಂ ನಈಮಿ, ರಾಜ್ಯ ಸಮಿತಿಯ ಸದಸ್ಯರಾದ ಹಾಫೀಳ್ ಹನೀಫ್ ಮಿಸ್ಬಾಹಿ, ಇಬ್ರಾಹಿಂ ಸಖಾಫಿ ಪುಂಡೂರು, ಹನೀಫ್ ಸಅದಿ, ಅಬ್ದುಲ್ ರಝಾಕ್ ಹಾಜಿ ಮುಕ್ಕ, ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾದ ಜೆಎಚ್ ಸಿದ್ದೀಕ್ ಕಾಜೂರು, ಎಸ್ ಎಂ ಎ ಜಿಲ್ಲಾ ಸಮಿತಿಯ ಸಿರಾಜುದ್ದೀನ್ ಸಖಾಫಿ ಪಿಚಲಾರು, ಝಾಕಿರ್ ಕಣಿಯೂರು ಮೊದಲಾದವರು ಉಪಸ್ಥಿತರಿದ್ದರು.

ಕಾಂತಿಜಾಲ್ ಮದರಸ ಸಮಿತಿಯ ಹಂಝ ಮದನಿ, ನಝೀರ್, ಅಬ್ದುಲ್ಲಾ ಮದನಿ ಮೊದಲಾದವರು ಕಾರ್ಯಕ್ರಮವನ್ನು ಸಂಘಟಿಸಿದರು. ರಾಜ್ಯ ಕಾರ್ಯದರ್ಶಿ ಅಶ್ರಫ್ ಸಖಾಫಿ ಮೂಡಡ್ಕ ಸ್ವಾಗತಿಸಿ, ಈಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಕಬಕ ಧನ್ಯವಾದಗೈದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News