×
Ad

ಮಂಗಳೂರು: ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಐವನ್ ಡಿಸೋಜಗೆ ಅಭಿನಂದನೆ

Update: 2024-07-14 23:20 IST

ಮಂಗಳೂರು: ಕರ್ನಾಟಕ ವಿಧಾನ ಪರಿಷತ್ತಿಗೆ ದ್ವಿತೀಯ ಬಾರಿಗೆ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜರನ್ನು ರವಿವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಾಸಿಕ ಸಭೆಯಲ್ಲಿ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಬ್ಲಾಕ್ ಮಹಿಳಾ ಘಟಕದ ವತಿಯಿಂದ ಸನ್ಮಾನಿಸಲಾಯಿತು.

ಸಭೆಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಗೀತಾ ಅತ್ತಾವರ, ಡಿಸಿಸಿ ಕಾರ್ಯದರ್ಶಿಯಾಗಿ ನೇಮಕಗೊಂಡ ಲಕ್ಷ್ಮೀನಾಯರ್, ನಾಮನಿರ್ದೇಶನ ಕಾರ್ಪೊರೇಟರ್ ಆಗಿ ನೇಮಕಗೊಂಡ ಹೇಮಂತ್ ಗರೋಡಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ನೇಮಕಗೊಂಡ ಸಬಿತಾ ಮಿಸ್ಕಿತ್ ಇವರೆಲ್ಲರನ್ನೂ ಅಭಿನಂದಿಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲೀಂ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪಾಲಿಕೆ ಪ್ರತಿಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ, ಕಾರ್ಪೊರೇಟರ್ ಎ. ಸಿ. ವಿನಯ್ ರಾಜ್, ಕೆಪಿಸಿಸಿ ಸದಸ್ಯೆ ಅಪ್ಪಿ, ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಕಲಾ ಜೋಗಿ, ಮಾಜಿ ಕಾರ್ಪೊರೇಟರ್ ನಾಗೇಂದ್ರ ಕುಮಾರ್, ಡಿಸಿಸಿ ಪದಾಧಿಕಾರಿಗಳಾದ ಹೊನ್ನಯ್ಯ, ಟಿ. ಕೆ. ಸುಧೀರ್, ಪ್ರಭಾಕರ್ ಶ್ರೀಯನ್, ಭಾಸ್ಕರ್ ರಾವ್, ಬ್ಲಾಕ್ ವೀಕ್ಷಕ ಬ್ಲಾಕ್ ಬಶೀರ್ ಬೈಕಂಪಾಡಿ, ಹಾಗೂ ಕಾರ್ಪೊರೇಟರ್, ಮಾಜಿ ಕಾರ್ಪೊರೇಟರ್‌ಗಳು, ವಾರ್ಡ್ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಹಾಗೂ ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News