ವಿಶೇಷ ಪ್ರೋತ್ಸಾಹಧನ: ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ
ಮಂಗಳೂರು, ಜ.19: ಪ್ರಸಕ್ತ (2025-26ನೇ) ಸಾಲಿನಲ್ಲಿ National Council for Teacher Education ನಿಂದ ಮಾನ್ಯತೆ ಪಡೆದಿರುವ ಸರಕಾರಿ/ಅರೆ ಸರಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ವಿದ್ಯಾರ್ಥಿಗಳಿಗೆ 25,000 ರೂ. ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜನವರಿ 31ರವರೆಗೆ ವಿಸ್ತರಿಸಲಾಗಿದೆ.
ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಜಮೆ ಮಾಡಲಾಗುವುದು. ಆಸಕ್ತ ಅಲ್ಪ ಸಂಖ್ಯಾತರ ಸಮುದಾಯದ ಬಿಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳ ಸಹಿತ ಸೇವಾಸಿಂಧು ಪೋರ್ಟಲ್ https://sevasindhuservices. karnataka.gov.in ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮಂಗಳೂರು (0824-2433078), ಬಂಟ್ವಾಳ (0825-5232470), ಬೆಳ್ತಂಗಡಿ (0826-295335), ಪುತ್ತೂರು (0825-1237078), ಸುಳ್ಯ (0825-7230666) ಹಾಗೂ ಇಲಾಖೆಯ ವೆಬ್‌ಸೈಟ್ https://dom.karnataka.gov.in ಸಹಾಯವಾಣಿ: 8277799990ಗೆ ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದೆ.