ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ, ನಿವೃತ್ತ ನೌಕರರು ಹಾಗೂ ಸಾಧಕರಿಗೆ ಅಭಿನಂದನೆ
ಬಂಟ್ವಾಳ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಶಾಖೆಯ 2023–24 ಹಾಗೂ 2024–25ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ನಿವೃತ್ತ ಸರ್ಕಾರಿ ನೌಕರರು ಹಾಗೂ ಸಾಧಕರಿಗೆ ಅಭಿನಂದನಾ ಸಮಾರಂಭವು ಫೆಬ್ರವರಿ 1ರಂದು (ರವಿವಾರ) ಬೆಳಿಗ್ಗೆ 10 ಗಂಟೆಗೆ ಬಿ.ಸಿ.ರೋಡಿನ ಸರ್ಕಾರಿ ನೌಕರರ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ಯು. ರಾಜೇಶ್ ನಾಯಕ್ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಬಿ. ರಮಾನಾಥ ರೈ ಅವರು ಗಣ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಎಂ.ಎಸ್. ಅವರು ಸಾಧಕರನ್ನು ಅಭಿನಂದಿಸಲಿದ್ದಾರೆ.
ಈ ಸಂದರ್ಭದಲ್ಲಿ ಬಂಟ್ವಾಳ ತಹಶೀಲ್ದಾರ್ ಜಿ. ಮಂಜುನಾಥ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಕುಮಾರ್ ರೈ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮಾಲತಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಎಇಇ) ತಾರಾನಾಥ ಸಾಲ್ಯಾನ್ ಪಿ., ಬಂಟ್ವಾಳ ಪಿಂಚಣಿದಾರರ ಸಂಘದ ಅಧ್ಯಕ್ಷ ಪಿ. ಲೋಕನಾಥ ಶೆಟ್ಟಿ, ಸರ್ಕಾರಿ ನೌಕರರ ಸಂಘದ ಬಂಟ್ವಾಳ ಶಾಖೆಯ ನಿಕಟಪೂರ್ವ ಅಧ್ಯಕ್ಷ ಉಮಾನಾಥ ರೈ ಮೇರಾವು ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
ಈ ವಿಷಯವನ್ನು ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.