×
Ad

ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ಪುತ್ತೂರಿನ ಡಾ.ಎಂ. ಚಂದ್ರ ಪೂಜಾರಿ ನೇಮಕ

Update: 2023-09-03 22:27 IST

ಡಾ.ಎಂ. ಚಂದ್ರ ಪೂಜಾರಿ

ಮಂಗಳೂರು: ಉನ್ನತ ಶಿಕ್ಷಣ ಅಕಾಡೆಮಿಯ ನಿರ್ದೇಶಕರಾಗಿ ನಿವೃತ್ತ ಪ್ರಾಧ್ಯಾಪಕ ಡಾ.ಎಂ. ಚಂದ್ರ ಪೂಜಾರಿ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಪ್ರೊ. ಎಸ್‌.ಎಂ. ಶಿವಪ್ರಸಾದ್‌ ಅವರು ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ನಿರ್ದೇಶಕರ ಹುದ್ದೆಗೆ ಗುತ್ತಿಗೆ ಆಧಾರದ ನೇಮಕಾತಿಗೆ ಸಂಬಂಧಿಸಿದ ಷರತ್ತು ಮತ್ತು ನಿಬಂಧನೆಗಳನ್ನು ತದನಂತರದಲ್ಲಿ ನಿಯಮಾನುಸಾರ ಹೊರಡಿಸಲಾಗುವುದು. ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಗುತ್ತಿಗೆ ಆಧಾರದ ಮೇಲೆ ಡಾ.ಎಂ. ಚಂದ್ರ ಪೂಜಾರಿ ನಿರ್ದೇಶಕರಾಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನವರಾದ ಚಂದ್ರ ಪೂಜಾರಿ, ಸೈಂಟ್ ಫಿಲೋಮಿನಾ ಹೈಸ್ಕೂಲ್ ಹಾಗೂ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು. ಎಂ.ಕಾಮ್ ಅಧ್ಯಯನವನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಿದ್ದರು. ಇದೇ ವಿಶ್ವವಿದ್ಯಾಲಯದಲ್ಲಿ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಷಯದಲ್ಲಿ ಪಿ.ಎಚ್.ಡಿ ಪದವಿಯನ್ನೂ ಪಡೆದಿದ್ದರು.‌

ಡಾ.ಚಂದ್ರ ಪೂಜಾರಿ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ ಹಾಗೂ ಹಾವೇರಿ ಜಾನಪದ ವಿಶ್ವವಿದ್ಯಾಲಯದ ಅನ್ವಯಿಕ ಜಾನಪದ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದಾರೆ.

ಸಮಾಜ ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವ ಡಾ.ಚಂದ್ರ ಪೂಜಾರಿ ಅವರು ಪ್ರಥಮ ಬಾರಿಗೆ ರಾಜ್ಯದಲ್ಲಿ ದಲಿತ್ ಡೆವೆಲಪ್ಮೆಂಟ್ ಇಂಡೆಕ್ಸ್ ಸಿದ್ಧಗೊಳಿಸಿದ ತಜ್ಞರಾಗಿದ್ದಾರೆ.

ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಕೋರ್ ಕಮಿಟಿ ಸದಸ್ಯರಾಗಿ, ಸ್ಟೇಟ್ ಹ್ಯೂಮನ್ ಡೆವಲಪ್ಮೆಂಟ್ ಇಂಡೆಕ್ಸ್ ಕೋರ್ ಕಮಿಟಿ ಸದಸ್ಯರಾಗಿ, ರಾಜ್ಯ ಆಡಳಿತ ತರಬೇತಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾಗಿ, ಮೈಸೂರಿನ ಅಬ್ದುಲ್ ನಝೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾಗಿಯೂ ಕಾರ್ಯನಿರ್ವಹಿಸಿದ್ದರು.

ಒಟ್ಟು 22 ಕೃತಿಗಳನ್ನು ಬರೆದಿರುವ ಡಾ.ಚಂದ್ರ ಪೂಜಾರಿ ಅವರು, ದಿನ ಪತ್ರಿಕೆಗಳ ಅಂಕಣಗಾರರಾಗಿ ಬರವಣಿಗೆಯಲ್ಲಿ ತೊಡಗಿಸಿಕೊಂಡವರು.‌ ರಾಜ್ಯದ ವಿವಿಧ ಟಿ.ವಿ.ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ವಿಚಾರ ಮಂಡನೆ ಮಾಡುತ್ತಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News