×
Ad

ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ತಕೃ, ನಿವೃತ್ತ ಶಿಕ್ಷಕಿ ಕಮಲಾಕ್ಷಿ ಶೆಟ್ಟಿ ನಿಧನ

Update: 2026-01-07 21:38 IST

ಸುಳ್ಯ: ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕøತ, ನಿವೃತ್ತ ಮುಖ್ಯ ಶಿಕ್ಷಕಿ ಕಮಲಾಕ್ಷಿ ವಿ.ಶೆಟ್ಟಿ (80) ಅಲ್ಪ ಕಾಲದ ಅಸೌಖ್ಯ ದಿಂದ ಸುಳ್ಯದ ಖಾಸಾಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು.

ಕೆಲ ಸಮಯದಿಂದ ವಯೋ ಸಹಜ ಅಸೌಖ್ಯತೆಯಿಂದಿದ್ದ ಕಮಲಾಕ್ಷಿ ಟೀಚರ್ ರವರು ಚೆನ್ನಕೇಶವ ದೇವಸ್ಥಾನದ ಬಳಿ ತಮ್ಮ ಮನೆಯಲ್ಲಿ ಇದ್ದರು. ಮಂಗಳವಾರ ತೀವ್ರ ಅಸ್ವಸ್ಥಗೊಂಡಾಗ ಅವರನ್ನು ಸುಳ್ಯದ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು.

1966ರಲ್ಲಿ ಸೇವೆಗೆ ಸೇರಿದ ಅವರು ಮಂಗಳೂರು, ಸುಳ್ಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಶಾಲೆಯ ಹಾಗೂ ಶೈಕ್ಷಣಿಕ ಅಭಿವೃದ್ದಿಗಾಗಿ ಹಲವು ಯೋಜನೆಗಳನ್ನು ಹಾಕಿಕೊಂಡು ಕಾರ್ಯಗತಗೊಳಿಸಿದ್ದರು. ಇವರ ಸೇವೆಯನ್ನು ಗುರುತಿಸಿ ಜಿಲ್ಲಾ ಮತ್ತು ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ, ಕೆವಿಜಿ ಸಾಧನಾ ಶ್ರೀ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News