×
Ad

ಚಂಡಮಾರುತ ಸಾಧ್ಯತೆ: ಕರಾವಳಿಯ ಮೀನುಗಾರರಿಗೆ ಮುನ್ನೆಚ್ಚರಿಕೆ

Update: 2023-09-29 19:34 IST

ಫೈಲ್‌ ಫೋಟೊ 

ಮಂಗಳೂರು, ಸೆ.29: ತಿರುವನಂತಪುರಂನ ಭಾರತೀಯ ಹವಾಮಾನ ಇಲಾಖೆಯು ನೀಡಿದ ಮುನ್ಸೂಚನೆಯಂತೆ ಅಕ್ಟೋಬರ್‌ 2 ರವರೆಗೆ ಅರಬ್ಬಿ ಸಮುದ್ರದಲ್ಲಿ ನಿಮ್ನ ಒತ್ತಡ ಉಂಟಾಗಿದ್ದು, ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ. ಹಾಗಾಗಿ ಕರಾವಳಿಯ ಮೀನುಗಾರರು ಮುನ್ನೆಚ್ಚರಿಕೆ ವಹಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮೀನುಗಾರಿಕೆ ನಡೆಸಲು ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕಾ ದೋಣಿಗಳು ತಕ್ಷಣ ದಡ ಸೇರುವಂತೆ ಅವರು ಸೂಚನೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News