×
Ad

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಎನ್ಐಎಯಿಂದ ಬಜ್ಪೆ, ಸುರತ್ಕಲ್ ನಲ್ಲಿ 13 ಕಡೆ ದಾಳಿ

Update: 2025-08-02 11:53 IST

ಸುಹಾಸ್ ಶೆಟ್ಟಿ

ಸುರತ್ಕಲ್: ಸಂಘ ಪರಿವಾರದ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯ ಅಧಿಕಾರಿಗಳು ಶನಿವಾರ ಬೆಳಗ್ಗೆ ಬಜ್ಪೆ ಮತ್ತು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹಲವೆಡೆ ದಾಳಿ ಮಾಡಿದ್ದಾರೆ.

 ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮನೆ ಸೇರಿದಂತೆ ಸುಮಾರು 13 ಕಡೆಗಳಲ್ಲಿ ಎನ್ ಐ ಎ ಅಧಿಕಾರಿಗಳು ಇಂದು ಬೆಳಗ್ಗೆ ಆರು ಗಂಟೆಯ ಸುಮಾರಿಗೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಮೇ 1ರಂದು ಸಂಜೆ ಸುಹಾಸ್ ಶೆಟ್ಟಿ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ  ದಾಳಿ ನಡೆಸಿ ಕೊಲೆ ಮಾಡಲಾಗಿತ್ತು.

ಕೇಂದ್ರ ಗೃಹ ಸಚಿವಾಲಯವು ಈ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿ ಜೂನ್ 7ರಂದು ಆದೇಶ ಹೊರಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News