ಸುಳ್ಯ | ಡಿ.9ರಿಂದ ಉಬರಡ್ಕದಲ್ಲಿ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ
ಸಾಂದರ್ಭಿಕ ಚಿತ್ರ
ಸುಳ್ಯ, ಡಿ.4: ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ ಮಂಗಳೂರು (ಮಾಸ್ ಲಿಮಿಟೆಡ್) ವತಿಯಿಂದ ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಹಯೋಗದಲ್ಲಿ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರದೊಂದಿಗೆ ಡಿ.9ರಂದು ಉಬರಡ್ಕ ಮಿತ್ತೂರಿನ ಸಿರಿ ಸಹಕಾರ ಸೌಧದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭ ನಡೆಯಲಿದೆ.
ಬೆಳಗ್ಗೆ 10:30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಮಾಸ್ ಲಿಮಿಟೆಡ್ ಮಂಗಳೂರು ಅಧ್ಯಕ್ಷ ಸಹಕಾರ ರತ್ನ ಕೆ.ಸೀತಾರಾಮ ರೈ ಸವಣೂರು ಉದ್ಘಾಟಿಸುವರು. ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆ ಅಧ್ಯಕ್ಷತೆ ವಹಿಸುವರು. ಗ್ರಾಪಂ ಅಧ್ಯಕ್ಷೆ ಪೂರ್ಣಿಮಾ, ಉಬರಡ್ಕ ಮಿತ್ತೂರು ಶ್ರೀ ನರಸಿಂಹ ದೇವಸ್ಥಾನದ ಮೊಕ್ತೇಸರ ಜತ್ತಪ್ಪಗೌಡ, ಮಿತ್ತೂರು ಜೋಡು ದೈವಗಳ ದೈವಸ್ಥಾನದ ಮೊಕ್ತೇಸರ ವೆಂಕಟ್ರಮಣ ಕೆದಂಬಾಡಿ, ಸುಳ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ರವೀಂದ್ರ ಮುಖ್ಯ ಅತಿಥಿಗಳಾಗಿರುವರು. ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಸಹಕಾರ ರತ್ನ ಪುರಸ್ಕತ ಸಹಕಾರ ರತ್ನ ಪಿ.ಸಿ.ಜಯರಾಮರನ್ನು ಸಮ್ಮಾನಿಸಲಾಗುತ್ತದೆ ಎಂದು ಮಾಸ್ ಲಿಮಿಟೆಡ್ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ತಿಳಿಸಿದ್ದಾರೆ.