×
Ad

ಸುಳ್ಯ | ಅಕ್ರಮ ಸಾಗಾಟ : ತೋಡಿಕಾನ, ಸೋಣಂಗೇರಿಯಲ್ಲಿ ಮರದ ದಿಮ್ಮಿಗಳು ವಶ

Update: 2025-11-18 23:38 IST

ಸುಳ್ಯ, ನ.18: ತೋಡಿಕಾನ ಗ್ರಾಮದ ಅಡ್ಯಡ್ಕ ಮತ್ತು ಜಾಲ್ಸೂರು ಗ್ರಾಮದ ಸೋಣಂಗೇರಿಯಲ್ಲಿ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ.

ತೋಡಿಕಾನ ಗ್ರಾಮದ ಅಡ್ಯಡ್ಕದಲ್ಲಿ ಸಾಗುವಾನಿ ಮರದ ದಿಮ್ಮಿ ಸಾಗಿಸುತ್ತಿದ್ದಾರೆಂಬ ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ಒಂದು ಸಾಗುವಾನಿ ಮರದ ದಿಮ್ಮಿ ವಶ ಪಡಿಸಿದ್ದು, ಈ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದು ಸುಳ್ಯ ವಲಯ ಅರಣ್ಯಾಧಿಕಾರಿ ಮಂಜುನಾಥ ತಿಳಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಪಂಜ ವಲಯದ ಕಲ್ಮಡ್ಕ ಗ್ರಾಮದ ಓಟೆಕಜೆ ಎಂಬಲ್ಲಿಂದ ಎರಡು ಕಿರಾಲ್‌ಬೋಗಿ ಜಾತಿಯ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದಾಗ ಜಾಲ್ಸೂರು ಗ್ರಾಮದ ಸೋಣಂಗೇರಿ ಬಳಿ ವಾಹನ ಸಮೇತ ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ವಿಚಾರಣೆ ನಡೆಯುತ್ತಿದೆ ಎಂದು ಪಂಜ ವಲಯ ಆರ್‌ಎ್‌ಒ ಸಂ‘್ಯಾ ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಳ್ಯ ಮತ್ತು ಪಂಜ ವಲಯದ ಅರಣ್ಯ ಇಲಾಖೆಯ ಸಿಬ್ಬಂದಿ ‘ಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News