×
Ad

ಸುಳ್ಯ | ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಮುಹಮ್ಮದ್ ಇಕ್ಬಾಲ್ ಎಲಿಮಲೆ ಆಯ್ಕೆ

Update: 2025-11-12 23:30 IST

ಸುಳ್ಯ : ಸುಳ್ಯದಲ್ಲಿ ಕೇಂದ್ರ ಕಚೇರಿ ಹೊಂದಿರುವ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮುಹಮ್ಮದ್ ಇಕ್ಬಾಲ್ ಎಲಿಮಲೆ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಹಸೈನಾರ್ ಎ.ಕೆ ಕಲ್ಲುಗುಂಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ಶಿವಲಿಂಗಯ್ಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಸಂಘದ ಕಾರ್ಯನಿರ್ವಹಣಾಧಿಕಾರಿ ಪ್ರಜ್ವಲ್ ನಾಯ್ಕ್ ಸ್ವಾಗತಿಸಿದರು. ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಸಭೆಯಲ್ಲಿ ನಿರ್ದೇಶಕರಾದ ಅಬ್ದುಲ್ ರಹಿಮಾನ್ ಮೇನಾಲ ಈಶ್ವರ ಮಂಗಲ,ಮುಹಮ್ಮದ್ ರಫೀಕ್ ಸಿ.ಎಂ.ಐವತ್ತೊಕ್ಲು, ಕೆ.ಬಿ.ಇಬ್ರಾಹಿಂ ಮಂಡೆಕೋಲು, ಮುಹಿಯುದ್ದೀನ್ ಹಾಜಿ ಕೆ.ಎಂ, ಮುಹಮ್ಮದ್ ಅನ್ಸಾರ್ ಬೆಳ್ಳಾರೆ, ಮುಹಮ್ಮದ್ ಹನೀಫ್‌ ಎಸ್.ಕೆ. ಜಾರ್ಜ್ ಡಿಸೋಜ, ಆಮಿನಾ ಎಸ್., ಸಾಜಿದಾ ಜಿ.ಎ., ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News