×
Ad

ಸುಳ್ಯ | ತಾಲೂಕು ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ

ಕನ್ನಡದ ಬಗ್ಗೆ ಮಕ್ಕಳಲ್ಲಿ ಬಾಲ್ಯದಿಂದಲೇ ಜಾಗೃತಿ ಮೂಡಿಸಿ : ಡಾ.ಪ್ರಭಾಕರ ಶಿಶಿಲ

Update: 2025-11-03 20:45 IST

ಸುಳ್ಯ : ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕ ಇದರ ಆಶ್ರಯದಲ್ಲಿ ಅಮೃತ ಮಹೋತ್ಸವ ಸಮಿತಿ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಸಹಕಾರದಲ್ಲಿ  ಯು.ಸು.ಗೌರವ ಸ್ಮರಣಾರ್ಥ ಸುಳ್ಯ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ-2025 ಸುಳ್ಯ ಸರಕಾರಿ ಪಿಯು ಕಾಲೇಜಿನಲ್ಲಿ ನಡೆಯಿತು.

ಹಿರಿಯ ಸಾಹಿತಿ ಡಾ. ಪ್ಭಾಕರ ಶಿಶಿಲ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿ 'ಕನ್ನಡದ ಬಗೆಗಿನ ಆಸಕ್ತಿಯನ್ನು ವಿದ್ಯಾರ್ಥಿಗಳ ಜೀವನದಿಂದಲೇ ಬೆಳೆಸಿ ಕೊಡಬೇಕಾಗಿದೆ. ಎಲ್ಲಾ ಶಿಕ್ಷಣ ಸಂಸ್ಥೆಗಳು ಕನ್ನಡಕ್ಕಾಗಿ ಮೊದಲ ಆದ್ಯತೆಯನ್ನು ನೀಡಿ ಮಕ್ಕಳ ಬಾಲ್ಯ ಜೀವನದಿಂದಲೇ ಕನ್ನಡದ ಬಗ್ಗೆ ಜಾಗೃತಿ ಮೂಡಿಸಬೇಕು. ಮಕ್ಕಳ ನೇತೃತ್ವದಲ್ಲಿ ನಡೆಸುವ ಈ ಸಾಹಿತ್ಯ ಸಮ್ಮೇಳನ ಒಂದು ಮಾದರಿ ಸಮ್ಮೇಳನವಾಗಿದೆ ಎಂದು ಹೇಳಿದರು.

ಸಮ್ಮೇಳನದ ಅಧ್ಯಕ್ಷತೆಯನ್ನು ಸುಳ್ಯ ಸರಕಾರಿ ಪಿಯು ಕಾಲೇಜಿನ 10ನೇ ತರಗತಿ ವಿದ್ಯಾರ್ಥಿನಿ ಪೌರ್ಣಮಿ ಕೆ ವಹಿಸಿದ್ದರು. ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ ಬಿ ಸುಧಾಕರ್ ರೈ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಲಿಂಗಪ್ಪ ಗೌಡ ಕೇರ್ಪಳ ಕನ್ನಡ ಧ್ವಜವನ್ನು ಹಾರಿಸುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಆತ್ಮೀಯ ಕೆ., ಸುಳ್ಯ ನಗರ ಪಂಚಾಯತ್‌ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಸುಳ್ಯ ಪಿಯು ಕಾಲೇಜು ಪ್ರಾಂಶುಪಾಲ ಮೋಹನ್ ಗೌಡ ಬೊಮ್ಮೆಟ್ಟಿ, ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪದ್ಮಾವತಿ ಎನ್.ಪಿ., ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಸದಸ್ಯ ರಾಮಚಂದ್ರ ಪಲ್ಲತಡ್ಕ, ಶಾಲಾ ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ಸುಳ್ಯ ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು, ಕೋಶಾಧಿಕಾರಿ ದಯಾನಂದ ಆಳ್ವ, ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಕಾರ್ಯದರ್ಶಿ ಅಬ್ದುಲ್ಲಾ ಅರಂತೋಡು ಮೊದಲಾದವರು ಉಪಸ್ಥಿತರಿದ್ದರು.

ಸಾಹಿತ್ಯ ಸಮ್ಮೇಳನದಲ್ಲಿ ಕವಿಗೋಷ್ಠಿ, ಚರ್ಚಾಗೋಷ್ಠಿ ಹಾಗೂ ವಿವಿಧ ಸಾಂಸ್ಕೃತಿಕ ಕನ್ನಡ ಕಲರವ ಕಾರ್ಯಕ್ರಮಗಳು ನಡೆಯಿತು. ಚಂದ್ರಾವತಿ ಬಡ್ಡಡ್ಕ ಸ್ವಾಗತಿಸಿ, ಗ್ರೀಷ್ಮಾ ಎಂ ಬಿ ವಂದಿಸಿದರು. ರೋಟರಿ ಪಿಯು ಕಾಲೇಜು ವಿದ್ಯಾರ್ಥಿನಿಯರಾದ ವೈಷ್ಣವಿ ಕೆ., ಅಂಶಿಕ ಕೆ.ಆರ್ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News