×
Ad

ಸುಳ್ಯ: ರಸ್ತೆ ದಾಟುತ್ತಿದ್ದ ಬಾಲಕಿಗೆ ಅಂಬ್ಯುಲೆನ್ಸ್ ಢಿಕ್ಕಿ

Update: 2023-09-12 19:57 IST

ಸುಳ್ಯ: ರಸ್ತೆ ದಾಟುತ್ತಿದ್ದ ಪ್ರೌಢಶಾಲಾ ಬಾಲಕಿಗೆ ಖಾಸಗಿ ಆಸ್ಪತ್ರೆಯ ಅಂಬ್ಯುಲೆನ್ಸ್ ಢಿಕ್ಕಿ ಹೊಡೆದು ಬಾಲಕಿಯ ಕಾಲಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜಾಲ್ಸೂರಿನಲ್ಲಿ ಮಂಗಳವಾರ ಸಂಜೆ ನಡೆದಿದೆ.

ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಕನಕಮಜಲು ಗ್ರಾಮದ ಸುಣ್ಣಮೂಲೆ ನಿವಾಸಿ ನಾರಾಯಣ ಮೂಲ್ಯ ಎಂಬವರ ಪುತ್ರಿ ಯೋಗಿನಿ ಗಾಯಗೊಂಡ ಬಾಲಕಿ.

ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಜಾಲ್ಸೂರಿನ ಜೆ.ಕೆ. ಕಾಂಪ್ಲೆಕ್ಸ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರಿನ ಆಸ್ಪತೆಗೆ ತೆರಳಿ ಹಿಂತಿರುಗಿ ಬರುತ್ತಿದ್ದ ಸುಳ್ಯದ ಖಾಸಗಿ ಆಸ್ಪತ್ರೆಯ ಅಂಬ್ಯುಲೆನ್ಸ್ ಢಿಕ್ಕಿ ಹೊಡೆದಿದ್ದು, ಬಾಲಕಿ ರಸ್ತೆಗೆ ಬಿದ್ದು ಕಾಲಿಗೆ ಗಾಯಗೊಂಡಿದೆ. ಅದೇ ಅಂಬ್ಯುಲೆನ್ಸ್ ಮೂಲಕ ಗಾಯಗೊಂಡ ಬಾಲಕಿಯನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ದಾಖಲಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News