×
Ad

ಸುಳ್ಯ: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಸರ್ಕಾರಿ ವಾಹನ ಚಲಾಯಿಸಿದ ಅಧಿಕಾರಿ

Update: 2023-11-28 23:30 IST

ಸುಳ್ಯ: ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳ ತಿಂದ ಘಟನೆ ಸೋಮವಾರ (ನ.27) ರಾತ್ರಿ ನಡೆದಿದೆ.

ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ, ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ.

ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ, ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ. ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News