×
Ad

ಸುಳ್ಯ: ಮಸೂದ್ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು

Update: 2023-09-07 20:40 IST

ಮಸೂದ್

ಸುಳ್ಯ: ಕಳೆದ ವರ್ಷ ಕಳಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳಾದ ರಂಜಿತ್, ಸದಾಶಿವ, ಸುಧೀರ್ ಎಂಬವರಿಗೆ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಜಾಮೀನು ಮಂಜೂರು ಮಾಡಿದರು.

ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ಅರುಣ್ ಶಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ಮಾಡಿದ್ದರು. ಒಟ್ಟು ಎಂಟು ಆರೋಪಿಗಳ ಪೈಕಿ ಈ ಮೊದಲು ಮೂವರು ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News