×
Ad

ಸುಳ್ಯ| ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಚಾಲಕ ಮೃತ್ಯು

Update: 2024-08-22 17:31 IST

ಸುಳ್ಯ: ಸಂಪಾಜೆ ಗ್ರಾಮದ ದೊಡ್ಡಡ್ಕ ಸಮೀಪ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಕಾರು ಚಾಲಕ ಇದೀಗ ಮೃತಪಟ್ಟಿದ್ದಾರೆ.

ವಿರಾಜಪೇಟೆಯ ಗಣೇಶ್ (64) ಮೃತಪಟ್ಟವರು. ಇವರು ತಮ್ಮ ಮಗನನ್ನು ಮಂಗಳೂರಿನ ಏರ್‌ಪೋರ್ಟ್‌ಗೆ ಬಿಟ್ಟು ಬರುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದ್ದು, ಅಪಘಾತದ ಪರಿಣಾಮ ಗಣೇಶ್ ಅವರಿಗೆ ಎದೆಗೆ ಗಂಭೀರ ಗಾಯಗಳಾಯಿತು.

ಕೂಡಲೇ ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರೆಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಮಗಳು, ಅಳಿಯ ಮತ್ತು ಇನ್ನೋರ್ವ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News