×
Ad

ಸುಳ್ಯ: ಹಟ್ಟಿಯಿಂದ ದನ ಕಳವು ಪ್ರಕರಣ; ಕೇರಳದಲ್ಲಿ ಇಬ್ಬರು ಆರೋಪಿಗಳ ಬಂಧನ

Update: 2023-10-13 21:11 IST

ಸುಳ್ಯ: ಒಂದು ತಿಂಗಳ ಹಿಂದೆ ಸಂಪಾಜೆ ಕಲ್ಲುಗುಂಡಿಯ ಗೂನಡ್ಕದಲ್ಲಿ ಹಟ್ಟಿಯಿಂದ ದನ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಆರೋಪಿಗಳನ್ನು ಕೇರಳದಲ್ಲಿ ಬಂಧಿಸಿದ್ದಾರೆ.

ಸುಳ್ಯ ಮರ್ಕುಂಜ ನಿವಾಸಿ ಗಣೇಶ್ ಕಾಯಾರ ಮತ್ತು ಕೇರಳದ ಚೆಂಬೇರಿಯ ನಿವಾಸಿ ಅಬ್ದುಲ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಚಲನ ವಲನಗಳನ್ನು ಸಿಸಿ ಕ್ಯಾಮೆರಾಗಳ ಸಹಾಯದಿಂದ ಸೆರೆ ಹಿಡಿಯಲಾಗಿದೆ. ಸೆ. 13ರಂದು ತಡರಾತ್ರಿ ಎರಡು ಗಂಟೆ ವೇಳೆಗೆ ಗೂನಡ್ಕದ ವರದರಾಜ್ ಸಂಕೇಶ್ವರ್ ಅವರ ಮನೆಯ ಹಟ್ಟಿಯಲ್ಲಿದ್ದ ಎರಡು ಹಸುಗಳನ್ನು ಪಿಕಪ್ ಗೆ ತುಂಬಿ ಕದ್ದೊಯ್ಯಲಾಗಿತ್ತು. ಇದೀಗ ಆರೋಪಿಗಳನ್ನು ಸುಳ್ಯ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News