×
Ad

ಪಕ್ಷದ ತೀರ್ಮಾನಕ್ಕೆ ವಿರುದ್ಧ ಮತ ಚಲಾಯಿಸಿದವರ ವಿರುದ್ಧ ಶಿಸ್ತು ಕ್ರಮಕ್ಕೆ ಸುಳ್ಯ ಕಾಂಗ್ರೆಸ್ ಒತ್ತಾಯ

Update: 2023-08-12 20:17 IST

ಸುಳ್ಯ: ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಸುಳ್ಯದ ಶಿವಕೃಪಾ ಕಲಾ ಮಂದಿರದ ಸಭಾ ಭವನದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.

ಸಭೆಯಲ್ಲಿ ಸುಳ್ಯ ತಾಲೂಕಿನ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳಾಗಿ ಚುನಾಯಿತರಾದ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರುಗಳಿಗೆ ಅಭಿನಂದನೆ ಸಲ್ಲಿಸಲಾಯಿತು. ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ- ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ವಿಚಾರದಲ್ಲಿ ಆದ ಗೊಂದಲದ ಬಗ್ಗೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ವಿಚಾರ ಪ್ರಸ್ತಾಪಿಸಿದರು. ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಸಂದರ್ಭ ನಡೆದ ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ತೀರ್ಮಾನಕ್ಕೆ ವಿರುದ್ಧ ಮತ ಚಲಾಯಿಸಿದವರ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಬೇಕು ಎಂದು ಸಭೆಯಲ್ಲಿ ಮುಖಂಡರು ಒತ್ತಾಯಿಸಿದರು.

ಸರಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಬಗ್ಗೆ ಪ್ರತೀ ಗ್ರಾಮ ಮಟ್ಟದಲ್ಲಿ ಪಕ್ಷದ ನೆಲೆಯಲ್ಲಿ ಕಾರ್ಯಕರ್ತರು ಕಾರ್ಯಕ್ರಮ ಹಾಕಿಕೊಳ್ಳುವ ಬಗ್ಗೆ ತೀರ್ಮಾನಿಸಲಾಯಿತು. ಸುಳ್ಯ ತಾಲೂಕಿನ ವಿವಿಧೆಡೆ ನಡೆಯುತ್ತಿರುವ ಕಳ್ಳತನ ಪ್ರಕರಣಗಳ ನಿಯಂತ್ರಣದ ಬಗ್ಗೆ ಚರ್ಚಿಸಲಾಗಿ ಸಭೆಯ ನಂತರ ಸುಳ್ಯ ಪೊಲೀಸ್ ಠಾಣೆಗೆ ತೆರಳಿ ಉಪ ನಿರೀಕ್ಷಕರನ್ನು ಭೇಟಿಯಾಗಿ ಆದಷ್ಟು ಬೇಗ ಪ್ರಕರಣ ಭೇದಿಸಿ ಆರೋಪಿಗಳನ್ನು ಪತ್ತೆ ಹಚ್ಚಲು ಮನವಿ ಮಾಡುವುದಾಗಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಸುಳ್ಯ ವಿಧಾನಸಭಾ ಕ್ಷೇತ್ತದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಕೋಶಾಧಿಕಾರಿ ಕಳಂಜ ವಿಶ್ವನಾಥ ರೈ, ಮುಖಂಡರಾದ ಸೋಮಶೇಖರ ಕೊಯಿಂಗಾಜೆ, ಮಹಮ್ಮದ್ ಫವಾಜ್, ಆಬುಸಾಲಿ ಗೂನಡ್ಕ, ಮಹಮ್ಮದ್ ಕುಂಞಿ ಗೂನಡ್ಕ, ನಂದರಾಜ್ ಸಂಕೇಶ ,ಲಕ್ಷ್ಮಣ ಗೌಡ ಬೋಳ್ಳಾಜೆ , ಲೋಕೇಶ್ ಅಕ್ರಿಕಟ್ಠೆ, ರಾಧಾಕೃಷ್ಣ ಪರಿವಾರಕಾನ, ಮಜೀದ್ ಜಾಲ್ಸೂರು, ತಿಮ್ಮಯ್ಯ ತೊಡಿಕಾನ, ಅಶೋಕ್ ಚೂಂತಾರು, ವಿಜಯಕುಮಾರ್ ಕನಕಮಜಲು ಮೊದಲಾದವರು ಪಕ್ಷದ ಸಂಘಟನೆ ವಿಚಾರದಲ್ಲಿ ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ತೀರ್ಥರಾಮ ಜಾಲ್ಸೂರು, ಹಸೈನಾರ್ ಹಾಜಿ ಗೋರಡ್ಕ, ಅಬೂಬಕ್ಕರ್ ಅಡ್ಕಾರ್, ಅನುಸೂಯ, ಸುಜಯ ಕೃಷ್ಣ, ಅಬ್ದುಲ್ ಮಜೀದ್ ನಡುವಡ್ಕ, ಶ್ರೀಹರಿ ಕುಕ್ಕುಡೇಲು, ಜೂಲಿಯಾ ಕ್ರಾಸ್ತಾ, ಧೀರಾ ಕ್ರಾಸ್ತಾ, ಅಬೂಬಕ್ಕರ್ ಅಡ್ಕಾರ್, ಅನಿಲ್ ರೈ, ತಾಜುದ್ದೀನ್ ಅರಂತೋಡು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ ಎಸ್ ಗಂಗಾಧರ ಸ್ವಾಗತಿಸಿ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News