×
Ad

ಸುರತ್ಕಲ್, ಗುರುಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್‌ ರೋಡ್‌ ಶೋ

Update: 2024-04-23 09:59 IST

ಮಂಗಳೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ  ಬೃಹತ್ ರೋಡ್ ಶೋ ಮಂಗಳವಾರ ನಡೆಯಲಿದೆ.

ಮಂಗಳವಾರ ಸಂಜೆ 4:30ಕ್ಕೆ  ಹೊಸಬೆಟ್ಟುವಿನಿಂದ ಆರಂಭಗೊಳ್ಳಲಿರುವ ರೋಡ್ ಶೋ, ರಾಷ್ಟ್ರೀಯ ಹೆದ್ದಾರಿಯ ಮೂಲಕ ಬಂದು ಬೈಕಂಪಾಡಿ ಎಪಿಎಂಸಿ ಮುಂಭಾಗದಲ್ಲಿ ಸಂಜೆ 6:30ಕ್ಕೆ ನಡೆಯಲಿರುವ ಬಹಿರಂಗ ಸಭೆಯೊಂದಿಗೆ ಮುಕ್ತಾಯಗೊಳ್ಳಲಿದೆ.

ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್‌ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News