×
Ad

ಸುರತ್ಕಲ್‌ನ ಎನ್ಐಟಿಕೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Update: 2026-01-26 18:46 IST

ಮಂಗಳೂರು : ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್ಐಟಿಕೆ) ವಠಾರದಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಸಂಸ್ಥೆಯ ಆವರಣದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಶಿಸ್ತುಬದ್ಧ ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ಸಂಸ್ಥೆಯ ನಿರ್ದೇಶಕ ಪ್ರೊ.ಬಿ.ರವಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ಸಂವಿಧಾನವು ಕೇವಲ ಮೂಲಭೂತ ಹಕ್ಕುಗಳ ಬಗ್ಗೆ ಮಾತ್ರವಲ್ಲದೆ ನಮ್ಮ ಕರ್ತವ್ಯಗಳ ಬಗ್ಗೆಯೂ ತಿಳಿಸುತ್ತದೆ. ಶಿಸ್ತು ಮತ್ತು ಕರ್ತವ್ಯ ಪ್ರಜ್ಞೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಎನ್ಐಟಿಕೆ ಸಂಸ್ಥೆಯ ಸಾಧನೆಗಳ ಬಗ್ಗೆ ಮಾಹಿತಿ ನೀಡಿದ ನಿರ್ದೇಶಕರು, ಎನ್ಐಟಿಕೆಯ ನಾವೀನ್ಯತೆ ನೀತಿಯನ್ನು ಕೇಂದ್ರ ಶಿಕ್ಷಣ ಸಚಿವರು ಶ್ಲಾಘಿಸಿದ್ದು, ಇದನ್ನು ದೇಶದ ಎಲ್ಲಾ ಎನ್ಐಟಿಗಳಲ್ಲಿ ಜಾರಿಗೆ ತರಲು ಶಿಫಾರಸು ಮಾಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ -2020ರ ಅನ್ವಯ, ಈ ವರ್ಷದಿಂದ ಹೊಸ ಪಠ್ಯಕ್ರಮ ಜಾರಿಗೆ ಬರಲಿದ್ದು, ಇದರಲ್ಲಿ ಕ್ರೀಡೆ ಮತ್ತು ಇತರ ಚಟುವಟಿಕೆಗಳಿಗೆ ವಿಶೇಷ ಕ್ರೆಡಿಟ್ ನೀಡಲಾಗುತ್ತದೆ ಎಂದರು.

ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಭದ್ರತಾ ಸಿಬ್ಬಂದಿಯ ಆಕರ್ಷಕ ಪಥಸಂಚಲನ ನಡೆಯಿತು. ಕಾರ್ಯಕ್ರಮದಲ್ಲಿ ಎನ್ಸಿಸಿ ಕಮಾಂಡಿಂಗ್ ಆಫೀಸರ್ ಲೆಫ್ಟಿನೆಂಟ್ ಕರ್ನಲ್ ನಿಖಿಲ್ ಖುಲ್ಲರ್, ಕ್ಯಾ.ಪಿ.ಸ್ಯಾಮ್ ಜಾನ್ಸನ್, ಕ್ಯಾ.ಎಚ್.ಶಿವಾನಂದ ನಾಯಕ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News