×
Ad

ಗಾಂಜಾ, ಚರಸ್ ಮಾರಾಟ ಮಾಡುತ್ತಿದ್ದ ಆರೋಪಿಗಳ ಸೆರೆ; ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ

Update: 2025-03-28 23:16 IST

 ತೈಸಿರ್ ಇಸ್ಮಾಯಿಲ್ ಹುಸೈನ್ / ರೋಯಸ್ಟನ್ ಕ್ಸವಿಯರ್ ಲೋಬೋ

ಮಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ, ಚರಸ್, ಗಾಂಜಾ ಮತ್ತಿತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಪಾಂಡೇಶ್ವರ ಸುಭಾಷ್‌ನಗರದ ತೈಸಿರ್ ಇಸ್ಮಾಯಿಲ್ ಹುಸೈನ್ (23) ಮತ್ತು ಮೂಲತಃ ಬೋಳಂಗಡಿಯ ಪ್ರಸಕ್ತ ಕದ್ರಿ ಶಿವಭಾಗ್‌ನಲ್ಲಿ ವಾಸವಾಗಿರುವ ರೋಯಸ್ಟನ್ ಕ್ಸವಿಯರ್ ಲೋಬೋ(22) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಮಾದಕ ವಸ್ತುಗಳನ್ನು ಖರೀದಿಸಿಕೊಂಡು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕದ್ರಿ ಶಿವಭಾಗ್‌ನಲ್ಲಿ ಬಂಧಿಸಿದರು.

ಆರೋಪಿಗಳಿಂದ 8 ಲಕ್ಷ ರೂ. ಬೆಲೆಯ ಮಾದಕ ವಸ್ತುಗಳು ಮತ್ತು 2 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಲಾಗಿದೆ.

ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್‌ರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ರಫೀಕ್ ಕೆ.ಎಂ., ಎಸ್ಸೈ ನರೇಂದ್ರ, ಎಎಸ್ಸೈ ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News