×
Ad

ಮೂಡುಬಿದಿರೆ | ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ

Update: 2025-12-12 14:58 IST

ಮೂಡುಬಿದಿರೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಮೂಡುಬಿದಿರೆ ತಾಲೂಕಿನ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗುರುವಾರ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ಮೂಡುಬಿದಿರೆ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಮೂಡುಬಿದಿರೆ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷೆ ಪ್ರಫುಲ್ಲ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಜಿಲ್ಲಾ ಕಾರ್ಯದರ್ಶಿ ಪ್ರತೀಮ್ ಕುಮಾರ್, ಜಿಲ್ಲಾ ಕೋಶಾಧಿಕಾರಿ ನವೀನ್ ಚಂದ್ರ ಅಂಬೂರಿ, ಜಿಲ್ಲಾ ಸಂಘಟನಾ ಆಯುಕ್ತರಾದ ವಸಂತ್ ದೇವಾಡಿಗ, ಶಿಬಿರ ಸಹಾಯಕರಾದ ವಿನೋದ್ ಚೇವಾರ್ HWB(S), ಡಾ.ರಾಹುಲ್, ಅಕ್ಕಮ್ಮ LT (G),ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ ಉಪಸ್ಥಿತರಿದ್ದರು.

ಪ್ರಾರಂಭಿಕ ತರಬೇತಿ ಶಿಬಿರದಲ್ಲಿ ಒಟ್ಟು 45 ಮತ್ತು ಪುನಶ್ಚೇತನ ತರಬೇತಿ ಶಿಬಿರದಲ್ಲಿ 18 ಸೇರಿ 63 ಶಿಕ್ಷಕ/ಶಿಕ್ಷಕಿಯರು ಭಾಗವಹಿಸುತ್ತಾರೆ.

ಕಾರ್ಯಕ್ರಮದಲ್ಲಿ ಆಳ್ವಾಸ್ ಬಿ.ಇಡಿ ಕಾಲೇಜು ಮೂಡುಬಿದಿರೆಯ ರೇಂಜರ್ಸ್ ವಿದ್ಯಾರ್ಥಿಗಳು ಸಹಕರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News