×
Ad

ಬಂಟ್ವಾಳ : 2025-26ನೇ ಸಾಲಿನ ತಾಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ

Update: 2025-11-13 20:53 IST

ಬಂಟ್ವಾಳ: 2025-26ನೇ ಸಾಲಿನ ತಾಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆಯು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಅಧ್ಯಕ್ಷತೆಯಲ್ಲಿ ಶಾಸಕರ ಕಛೇರಿಯಲ್ಲಿ ನಡೆಯಿತು.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ ರಾಜ್ ಅಧಿನಿಯಮ ಪ್ರಕಾರ ರಚನೆಗೊಂಡ ಬಂಟ್ವಾಳ ತಾಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ 2026-27 ನೇ ಸಾಲಿನ ತಾಲೂಕು ಅಭಿವೃದ್ಧಿ ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವ ಕುರಿತು ಶಾಸಕರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಅವರು, ಸರಕಾರದ ಅನುದಾನಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಕೆ ಮಾಡಿಕೊಂಡು ಅಭಿವೃದ್ಧಿಗೆ ಸಹಕಾರ ನೀಡಿ. ಮಂಜೂರುಗೊಂಡ ಅನುದಾನಗಳ ಉಳಿಕೆಯಾಗದಂತೆ ಅಧಿಕಾರಿಗಳು ಗಮನಹರಿಸಬೇಕು ಹಾಗೂ ಅನುದಾನ ನೀಡುವ ವೇಳೆ ಯಾವುದೇ ತಾರತಮ್ಯ ಮಾಡದೆ ಸಮಾನವಾಗಿ ಹಂಚಿಕೆಯಾಗುವಂತೆ ನೋಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಬಂಟ್ವಾಳ ಯೋಜನಾ ಸಮಿತಿ ಉಪಾಧ್ಯಕ್ಷೆ ಕನ್ಯಾನ ಗ್ರಾ.ಪಂ‌.ನ ಅಧ್ಯಕ್ಷೆ ರೇಖಾ ರಮೇಶ್, ಸಮಿತಿ ಸದಸ್ಯರುಗಳಾದ ಬಂಟ್ವಾಳ ಪುರಸಭೆ ಅಧ್ಯಕ್ಷ ವಾಸು ಪೂಜಾರಿ, ಅಮ್ಮುಂಜೆ ಗ್ರಾ.ಪಂ.ಅಧ್ಯಕ್ಷೆ ಲಕ್ಮೀ , ಕಳ್ಳಿಗೆ ಗ್ರಾ.ಪಂ.ಅಧ್ಯಕ್ಷ ಪುರುಷೋತ್ತಮ ಕೊಟ್ಟಾರಿ, ಕಡೇಶಿವಾಲಯ ಗ್ರಾ.ಪಂ.ಅಧ್ಯಕ್ಷ ಭಾರತೀ ಎಸ್ ರಾವ್, ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಶಾರದಾ, ಉಳಿ ಗ್ರಾ.ಪಂ.ಅಧ್ಯಕ್ಷೆ ರೇವತಿ, ಸದಸ್ಯ ಕಾರ್ಯದರ್ಶಿ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಸಚಿನ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಕಾಶ್ಚಂದ್ರ ಬಿ. ಎ.ಪಿ.ಎಂ.ಸಿ.ಬಂಟ್ಚಾಳದ ಕಾರ್ಯದರ್ಶಿ ಶಮಂತ್ ಕುಮಾರ್, ಎಲ್.ಡಿ.ಬ್ಯಾಂಕ್ ನ ಮ್ಯಾನೇಜರ್ ಕುಮಾರ್ ಮುಟಗಾರ್, ಉಪ ತಹಶೀಲ್ದಾರ್ ಶಿವಪ್ರಸಾದ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News