×
Ad

ಮೀನುಗಾರಿಕೆ ಅಭಿವೃದ್ಧಿಯಲ್ಲಿ ತಾಂತ್ರಿಕ ತರಬೇತಿ ಮುಖ್ಯ: ಚೇತನ್ ಬೆಂಗ್ರೆ

Update: 2023-08-24 20:31 IST

ಮಂಗಳೂರು: ಮೀನುಗಾರಿಕೆ ಚಟುವಟಿಕೆಗಳಲ್ಲಿ ತಾಂತ್ರಿಕ ತರಬೇತಿ ಕಾರ್ಯಕ್ರಮ ಅತ್ಯಂತ ಮಹತ್ವದ್ದಾಗಿದೆ. ಜಿಲ್ಲೆಯ ಬೋಟ್ ಮಾಲಕರು ಮತ್ತು ಮೀನುಗಾರರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಟ್ರಾಲ್‌ಬೋಟ್ ಅಸೋಸಿಯೇಶನ್‌ನ ಅಧ್ಯಕ್ಷ ಚೇತನ್ ಬೆಂಗ್ರೆ ಕರೆ ನೀಡಿದರು.

ಮಂಗಳೂರು ಮೀನುಗಾರಿಕಾ ಕಾಲೇಜಿನ ತಾಂತ್ರಿಕ ಮತ್ತು ತಂತ್ರಜ್ಞಾನ ವಿಭಾಗ ಹಾಗೂ ಹೈದರಾಬಾದ್‌ನ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿಯ ವತಿಯಿಂದ ಮೀನುಗಾರಿಕಾ ಕಾಲೇಜಿನಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿದ್ದ ಮೂರು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತಾನಾಡಿದರು.

ಜಿಲ್ಲೆಯ ಮೀನುಗಾರರ ಹಿತಾಸಕ್ತಿಗೆ ಅನುಗುಣವಾಗಿ ನಗರದಲ್ಲಿರುವ ಮೀನುಗಾರಿಕಾ ಕಾಲೇಜು ಅತ್ಯುತ್ತಮ ಸಂಶೋಧನೆ ಮತ್ತು ತರಬೇತಿ ಕಾರ್ಯಕ್ರಮಗಳನ್ನು ಸಂಯೋಜಿಸುತ್ತಿದೆ. ಇದನ್ನು ಮೀನುಗಾರರ ಸಮುದಾಯ ಮತ್ತು ದೋಣಿ ಮಾಲ ಕರು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಪರ್ಸಿನ್ ಬೋಟ್ ಅಸೋಸಿಯೇಶನ್‌ನ ಅಧ್ಯಕ್ಷ ಶಶಿಕುಮಾರ್ ಬೆಂಗ್ರೆ ಹೇಳಿದರು.

ತರಬೇತಿಯ ಸಂಯೋಜಕ ಡಾ.ಜಯಾ ನಾಯ್ಕ್, ಅತಿಥಿ ರಾಜ್‌ಕುಮಾರ್ ನಾಯ್ಕ್, ಪ್ರಭಾರ ಡೀನ್ ಡಾ. ಎಸ್. ವರದರಾಜು ಮಾತನಾಡಿದರು.

ಸಹ ಪ್ರಾಧ್ಯಾಪಕ ಶಶಿಧರ ಬಾದಾಮಿ ವಂದಿಸಿದರು. ಪ್ರಾಪ್ತಿ ತರಬೇತಿ ನಡೆಸಿಕೊಟ್ಟರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News