×
Ad

ಟೆಂಪೊ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು

Update: 2026-03-10 23:44 IST

ಮಂಗಳೂರು, ಮಾ.10: ನಗರದ ಮರೋಳಿ ಟಿವಿಎಸ್ ಸರ್ವಿಸ್ ಸೆಂಟರ್ ಬಳಿ ಮಾ.9ರಂದು ದ್ವಿಚಕ್ರ ವಾಹನ - ಟೆಂಪೊ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಸಜೇಶ್ ಸದಾನಂದ ಪೂಜಾರಿ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ.

ಸಜೇಶ್ ಸದಾನಂದ ಪೂಜಾರಿಯವರು ತಿರುವು ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ  ಹೋಗುತ್ತಿದ್ದಾಗ ಅದರ ಹಿಂದಿನಿಂದ ಟೆಂಪೋವೊಂದನ್ನು ಅದರ ಚಾಲಕನು ದುಡುಕುತನ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದು ಪರಾರಿಯಾದ ಎನ್ನಲಾಗಿದೆ.

ಬೈಕ್‌ಗೆ ಟೆಂಪೊ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸಮೇತ ರಸ್ತೆಗೆ ಬಿದ್ದು ಸಜೇಶ್ ಸದಾನಂದ ಪೂಜಾರಿ ಅವರ ತಲೆಗೆ ತೀವ್ರ ಸ್ವರೂಪದ ಗಾಯವಾಗಿತ್ತು. ಬಳಿಕ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳು ಸಜೇಶ್ ಸದಾನಂದ ಪೂಜಾರಿ (27) ರವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಂಗಳೂರು ಟ್ರಾಫಿಕ್ ಸೌತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News