×
Ad

‘ಚಲೋ ಬೆಳ್ತಂಗಡಿ’ ಬೆಂಬಲಿಸಿ ನಡೆದ ಪಾದಯಾತ್ರೆ ಸಮಾರೋಪ

Update: 2023-08-24 21:12 IST

ಮಂಗಳೂರು: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಸಮರ್ಪಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಆ.28ರಂದು ನಡೆಯುವ ‘ಚಲೋ ಬೆಳ್ತಂಗಡಿ’ಯನ್ನು ಬೆಂಬಲಿಸಿ ಡಿವೈಎಫ್‌ಐ ದ.ಕ ಜಿಲ್ಲಾ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯ ಸಮಾರೋಪವು ಗುರುವಾರ ನಗರದಲ್ಲಿ ಜರುಗಿತು.

ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಮಾತನಾಡಿ ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಎಡ ಪಂಥೀಯರು ನಿರಂತರ ಹೋರಾಟದಲ್ಲಿದ್ದಾರೆ ಸೌಜನ್ಯಾ ಹೋರಾಟ ರಾಜ್ಯಕ್ಕೆ ಹಬ್ಬುತ್ತಿರುವಾಗ ಬಿಜೆಪಿ ಹೋರಾಟದ ನಾಟಕ ಮಾಡುತ್ತಿದೆ ಎಂದು ಆರೋಪಿಸಿದರು.

ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಮನಪಾ ಮಾಜಿ ಉಪ ಮೇಯರ್ ಮುಹಮ್ಮದ್ ಕುಂಜತ್ತಬೈಲ್, ಸಾಮರಸ್ಯ ಸಂಘಟನೆಯ ಸಂಚಾಲಕಿ ಮಂಜುಳಾ ನಾಯಕ್ ಮಾತನಾಡಿದರು.

ಡಿವೈಎಫ್‌ಐ ಜಿಲ್ಲಾ ಮುಖಂಡರಾದ ನಿತಿನ್ ಕುತ್ತಾರ್, ನವೀನ್ ಕೊಂಚಾಡಿ, ರಫೀಕ್ ಹರೇಕಳ, ತಯ್ಯೂಬ್ ಬೆಂಗ್ರೆ, ಜಗದೀಶ್ ಬಜಾಲ್, ಎಸ್‌ಎಫ್‌ಐ ಮುಖಂಡರಾದ ರೇವಂತ್ ಕದ್ರಿ, ಪ್ರಥಮ್ ಬಜಾಲ್, ಮಾಧುರಿ ಬೋಳಾರ, ಜನವಾದಿ ಮಹಿಳಾ ಸಂಘಟನೆಯ ಭಾರತಿ ಬೋಳಾರ, ಅಸುಂತಾ ಡಿಸೋಜ, ಪ್ರಮಿಳಾ ದೇವಾಡಿಗ, ಪ್ರಮೀಳಾ ಶಕ್ತಿನಗರ, ಆಶಾ ಬೋಳೂರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News