×
Ad

ತೊಕ್ಕೊಟ್ಟು: ಟೆಂಪೋ ಚಾಲಕ ಆತ್ಮಹತ್ಯೆ

Update: 2023-09-27 15:51 IST

ಉಳ್ಳಾಲ, ಸೆ.27: ಟೆಂಪೋ ಚಾಲಕರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬಾಸ್ಟಿಯನ್ ಚರ್ಚ್ ಬಳಿ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ತೊಕ್ಕೊಟ್ಟು ಕೃಷ್ಣ ನಗರ ಲಚ್ಚಿಲ್ ನಿವಾಸಿ ನಾಗೇಶ್ (62) ಮೃತರು. ಇವರು ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದ ಇವರು ದಿನನಿತ್ಯ ಟೆಂಪೋವನ್ನು ತೊಕ್ಕೊಟ್ಟು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ನಿಲ್ಲಿಸುತ್ತಿದ್ದರು. ಇಂದು ಬೆಳಗ್ಗೆ ನಾಗೇಶ್ ಟೆಂಪೋ ತೆಗೆಯದೆ ನಾಪತ್ತೆಯಾಗಿದ್ದು, ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಗಣೇಶ್ ಭವನ ಮಾಲಕರ ಮನೆಯಂಗಳದಲ್ಲೇ ನಿಲ್ಲಿಸಲಾಗಿದ್ದ ಟೆಂಪೋದೊಳಗೆ ನಾಗೇಶ್ ಅವರ ಮೊಬೈಲ್ ಫೋನ್, ನಗದು, ಚಪ್ಪಲಿ ಪತ್ತೆಯಾಗಿತ್ತು. ಅನುಮಾನಗೊಂಡು ಮನೆಮಂದಿ, ಸ್ಥಳೀಯರು ಬಾವಿಯಲ್ಲಿ ಹುಡುಕಾಟ ನಡೆಸಿದಾಗ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

  ಮೃತರು ಪತ್ನಿ ಹಾಗು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News